ಬೆಂ.ಗ್ರಾ.ಜಿಲ್ಲೆ: ಲೇಖಕರಿಂದ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಅನುಸೂಚಿತ ಜಾತಿ ಮತ್ತು ಪಂಗಡದ ದೌರ್ಜನ್ಯ ಅಧಿನಿಯಮದಲ್ಲಿರುವ ಅಸ್ಪೃಶ್ಯತೆ ನಿವಾರಣೆ ವಿಷಯವನ್ನು ಸಾರ್ವಜನಿಕರಿಗೆ / ವಿದ್ಯಾರ್ಥಿಗಳಿಗೆ ಬೀದಿ ನಾಟಕದ ಮೂಲಕ ಅರಿವು ಮೂಡಿಸಿ, ಅಸ್ಪೃಶ್ಯತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನುರಿತ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಅರ್ಹ ಬೀದಿ ನಾಟಕ ಕಲಾತಂಡಗಳಿಗೆ ತರಬೇತಿ ನೀಡಿ, ಬೀದಿನಾಟಕದ ಮೂಲಕ ಸಾರ್ವಜನಿಕರಲ್ಲಿ ಜನ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಆಶಯವಾಗಿದ್ದು, ಇದರಡಿ ಜಿಲ್ಲೆಯ ನುರಿತ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಲೇಖಕರನ್ನು ಆಯ್ಕೆ ಮಾಡಿ ಅವರಿಗೆ ಅಗತ್ಯ ತರಬೇತಿ ನೀಡಿ ಅವರಿಂದ ಬೀದಿ ನಾಟಕದ ಸ್ಕ್ರಿಪ್ಟ್‌ ಗಳನ್ನು ರಚಿಸಬೇಕಾಗಿರುತ್ತದೆ.

ಅರ್ಜಿ ಸಲ್ಲಿಸುವ ಲೇಖಕರು ಕಡ್ಡಾಯವಾಗಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಲೇಖಕರು ಸ್ವವಿವರದೊಂದಿಗೆ ಇತ್ತೀಚಿನ ಆರ್.‍ಡಿ. ಸಂಖ್ಯೆ ಹೊಂದಿರುವ ಜಾತಿ ಪ್ರಮಾಣಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು, ಅರ್ಜಿದಾರ ಲೇಖಕರು ಕನಿಷ್ಠ ಒಂದು ಕಥಾ ಸಂಕಲನ / ಕವನ ಸಂಕಲನ / ನಾಟಕಗಳು ಇತರೆ ಸಾಹಿತ್ಯದ ಲೇಖಕರಾಗಿ ಪುಸ್ತಕಗಳನ್ನು ಸ್ವಂತ ಪ್ರಕಾಶನ ಅಥವಾ ಬೇರೆ ಪ್ರಕಾಶನಗಳಿಂದ ಪ್ರಕಟಿಸಿದವರಿಗೆ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಸಿದ ಲೇಖಕರ ಆಯ್ಕೆಯನ್ನು ಇಲಾಖೆಯ ಜಿಲ್ಲಾಮಟ್ಟದ ಆಯ್ಕೆ ಹಾಗೂ ವೀಕ್ಷಣಾ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗುವುದು.

ಆಯ್ಕೆಯಾದ ಐದು ಜನ ಲೇಖಕರು ಬೀದಿ ನಾಟಕದ ಸ್ಕ್ರೀಪ್ಟ್ ಅನ್ನು ಒಂದು ವಾರದ ಕಾಲಮಿತಿಯೊಳಗೆ ಸಿದ್ದಪಡಿಸುವ ಷರತ್ತಿಗೆ ಒಳಪಡತಕ್ಕದ್ದು ಹಾಗೂ ಆಯ್ಕೆಯಾದ ಐದು ಜನ ಲೇಖಕರಿಗೆ ತಲಾ ರೂ.5000/-ಗಳ ಗೌರವ ಸಂಭಾವನೆಯನ್ನು ಪಾವತಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು 2021ರ ಅಕ್ಟೋಬರ್ 16 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ದೂರವಾಣಿ ಸಂಖ್ಯೆ: 080-29560059 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರಾದ ಮಂಜುನಾಥ ಆರಾಧ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……. 

ರಾಜಕೀಯ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

"ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ (IPL) ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ" ಎಂದು‌ ಡಿಸಿಎಂ ಡಿ.ಕೆ.

[ccc_my_favorite_select_button post_id="121800"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]