ಬೆಂ.ಗ್ರಾ.ಜಿಲ್ಲೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಅನುಸೂಚಿತ ಜಾತಿ ಮತ್ತು ಪಂಗಡದ ದೌರ್ಜನ್ಯ ಅಧಿನಿಯಮದಲ್ಲಿರುವ ಅಸ್ಪೃಶ್ಯತೆ ನಿವಾರಣೆ ವಿಷಯವನ್ನು ಸಾರ್ವಜನಿಕರಿಗೆ / ವಿದ್ಯಾರ್ಥಿಗಳಿಗೆ ಬೀದಿ ನಾಟಕದ ಮೂಲಕ ಅರಿವು ಮೂಡಿಸಿ, ಅಸ್ಪೃಶ್ಯತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನುರಿತ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಅರ್ಹ ಬೀದಿ ನಾಟಕ ಕಲಾತಂಡಗಳಿಗೆ ತರಬೇತಿ ನೀಡಿ, ಬೀದಿನಾಟಕದ ಮೂಲಕ ಸಾರ್ವಜನಿಕರಲ್ಲಿ ಜನ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಆಶಯವಾಗಿದ್ದು, ಇದರಡಿ ಜಿಲ್ಲೆಯ ನುರಿತ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಲೇಖಕರನ್ನು ಆಯ್ಕೆ ಮಾಡಿ ಅವರಿಗೆ ಅಗತ್ಯ ತರಬೇತಿ ನೀಡಿ ಅವರಿಂದ ಬೀದಿ ನಾಟಕದ ಸ್ಕ್ರಿಪ್ಟ್ ಗಳನ್ನು ರಚಿಸಬೇಕಾಗಿರುತ್ತದೆ.
ಅರ್ಜಿ ಸಲ್ಲಿಸುವ ಲೇಖಕರು ಕಡ್ಡಾಯವಾಗಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಲೇಖಕರು ಸ್ವವಿವರದೊಂದಿಗೆ ಇತ್ತೀಚಿನ ಆರ್.ಡಿ. ಸಂಖ್ಯೆ ಹೊಂದಿರುವ ಜಾತಿ ಪ್ರಮಾಣಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು, ಅರ್ಜಿದಾರ ಲೇಖಕರು ಕನಿಷ್ಠ ಒಂದು ಕಥಾ ಸಂಕಲನ / ಕವನ ಸಂಕಲನ / ನಾಟಕಗಳು ಇತರೆ ಸಾಹಿತ್ಯದ ಲೇಖಕರಾಗಿ ಪುಸ್ತಕಗಳನ್ನು ಸ್ವಂತ ಪ್ರಕಾಶನ ಅಥವಾ ಬೇರೆ ಪ್ರಕಾಶನಗಳಿಂದ ಪ್ರಕಟಿಸಿದವರಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಿದ ಲೇಖಕರ ಆಯ್ಕೆಯನ್ನು ಇಲಾಖೆಯ ಜಿಲ್ಲಾಮಟ್ಟದ ಆಯ್ಕೆ ಹಾಗೂ ವೀಕ್ಷಣಾ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗುವುದು.
ಆಯ್ಕೆಯಾದ ಐದು ಜನ ಲೇಖಕರು ಬೀದಿ ನಾಟಕದ ಸ್ಕ್ರೀಪ್ಟ್ ಅನ್ನು ಒಂದು ವಾರದ ಕಾಲಮಿತಿಯೊಳಗೆ ಸಿದ್ದಪಡಿಸುವ ಷರತ್ತಿಗೆ ಒಳಪಡತಕ್ಕದ್ದು ಹಾಗೂ ಆಯ್ಕೆಯಾದ ಐದು ಜನ ಲೇಖಕರಿಗೆ ತಲಾ ರೂ.5000/-ಗಳ ಗೌರವ ಸಂಭಾವನೆಯನ್ನು ಪಾವತಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು 2021ರ ಅಕ್ಟೋಬರ್ 16 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಹಾಗೂ ದೂರವಾಣಿ ಸಂಖ್ಯೆ: 080-29560059 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರಾದ ಮಂಜುನಾಥ ಆರಾಧ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….