ಯಲಹಂಕ: ರೋಗಿಗಳಿಗೆ ವಿತರಿಸಬೇಕಿದ್ದ ಮಾತ್ರೆಗಳಿಗೆ ಇಲ್ಲಿನ ಸಿಬ್ಬಂದಿ ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಸ್ಥಳೀಯರು ದೂರಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕಿನ ರಾಜಾನುಕುಂಟೆ ಸರ್ಕಾರಿ ಪ್ರಾಥಮಿಕ ಕೇಂದ್ರದ ಆವರಣದ ಹಿಂಭಾಗದಲ್ಲಿ ಸಾವಿರಾರು ರೂ ಬೆಲೆ ಬಾಳುವ ಮಾತ್ರೆ ಹಾಗೂ ಔಷಧಿಗಳನ್ನು ಬೆಂಕಿಯಲ್ಲಿ ಹಾಕಿ ಸುಟ್ಟಿರುವುದು, ಅವಧಿ ಮುಗಿದಿರುವ ಮಾತ್ರೆಗಳನ್ನು ಹೊರಗೆ ಬಿಸಾಡಿರುವ ಘಟನೆ ನಡೆದಿದೆ. ಅಲ್ಲದೆ ಸುಟ್ಟು ಬಿಸಾಡಿರುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಹರಿ ಬಿಟ್ಟಿರುವುದು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಒಂದೆಡೆ ಅವಧಿ ಮುಗಿದಿರುವ ಮಾತ್ರೆಗಳಿದ್ದರೆ ಕೇಂದ್ರ ಕಚೇರಿಗೆ ಪತ್ರ ಬರೆದು ಮಾಹಿತಿ ನೀಡಿದರೆ ಸಂಬಂದಿಸಿದ ಇಲಾಖೆಯು ಅದನ್ನು ಹಿಂಪಡೆದು ದಾಖಲೆ ನೀಡುತ್ತಾರೆ. ಆದರೆ ಇಲ್ಲಿನ ಸಿಬ್ಬಂದಿ ಮತ್ತು ವೈದ್ಯಾಧಿಕಾರಿಗಳು ಸರ್ಕಾರಿ ನಿಯಮವನ್ನು ಗಾಳಿಗೆ ತೂರಿದ್ದಾರೆ ಮತ್ತೊಂದೆಡೆ ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಬೇಕೆಂಬ ನಿಯಮವಿದೆ. ಆದರೂ ಬಯಲು ಪ್ರದೇಶದಲ್ಲಿ ಬೆಂಕಿ ಹಚ್ಚಿ ನಿರ್ಲಕ್ಷ ತೋರಿರುವ ಸಿಬ್ಬಂದಿಯ ಕ್ರಮದಿಂದ ಇಲ್ಲಿನ ಜನರು ಗರಂ ಆಗಿದ್ದಾರೆ.
ಜನರ ಆರೋಗ್ಯ ಕಾಪಾಡಲು ನೀಡಬೇಕಿದ್ದ ಮಾತ್ರೆ ಮತ್ತು ಔಷಧಿಗಳನ್ನು ಬೇಜವಾಬ್ದಾರಿತನದಿಂದ ಬೆಂಕಿಗೆ ಆಹುತಿ ಮಾಡಿರುವ ಬಗ್ಗೆ ಮೇಲಾಧಿಕಾರಿಗಳು ತನಿಖೆ ನಡೆಸಿ ಸಿಬ್ಬಂದಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ನಾಗರೀಕರು ಆಗ್ರಹಿಸಿದ್ದಾರೆ.
ಔಷಧಿಗಳನ್ನು ಸುಟ್ಟಿರುವ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗಿದೆ ಬೆಂಕಿ ಇಟ್ಟಿರುವ ಜಾಗದ ಬೂದಿ ಅರೆಬರೆಸುಟ್ಟ ಮಾತ್ರೆಗಳ ಮಾದರಿಯನ್ನು ತೆಗೆದು ಸಂಗ್ರಹಿಸಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ವರದಿ ಕಳುಹಿಸಲಾಗಿದೆ ಎಂದು ತಾಲ್ಲೂಕು ವೈಧ್ಯಾಧಿಕಾರಿ ಡಾ.ರಮೇಶ್ ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….