ಮುಂಬೈ: ರಮಾನಂದ ಸಾಗರ್ ಅವರ ಜನಪ್ರಿಯ ರಾಮಾಯಣ ಧಾರಾವಾಹಿಯಲ್ಲಿ ರಾವಣ ಪಾತ್ರ ಮಾಡಿದ್ದ ನಟ ಅರವಿಂದ್ ತ್ರಿವೇದಿ (82ವರ್ಷ ) ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಟ ಅರವಿಂದ್ ತ್ರಿವೇದಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಗುಜರಾತಿ ಸಿನಿಮಾಗಳಲ್ಲಿ 40 ವರ್ಷಗಳಿಗೂ ಹೆಚ್ಚು ನಟನೆಯ ಪ್ರಯಾಣದಲ್ಲಿ ಹಲವು ಚಿತ್ರಗಳು ಜನಪ್ರಿಯತೆ ಪಡೆದಿವೆ. ಹಿಂದಿ ಮತ್ತು ಗುಜರಾತಿಯ ಸಾಮಾಜಿಕ, ಪೌರಾಣಿಕ ಕಥೆಯಾಧಾರಿತ ಸುಮಾರು 300ಕ್ಕು ಸಿನಿಮಾಗಳಲ್ಲಿ ಅರವಿಂದ್ ಅಭಿನಯಿಸಿದ್ದಾರೆ.
ರಾಮಾಯಣ ಧಾರಾವಾಹಿಯ ರಾವಣ ಪಾತ್ರ ರಾಷ್ಟ್ರಮಟ್ಟದಲ್ಲಿ ಅವರನ್ನು ಗುರುತು ನೀಡಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….