ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಪಿ.ಎಂ.ಕೇರ್ ಯೋಜನೆಯಡಿ ನಿರ್ಮಿಸಿರುವ ಪಿ.ಎಸ್.ಎ(ಆಕ್ಸಿಜನ್) ಘಟಕ ಉದ್ಘಾಟನಾ ಸಮಾರಂಭವನ್ನು ಅಕ್ಟೋಬರ್ 07ರಂದು 12 ಗಂಟೆಗೆ ಏರ್ಪಡಿಸಲಾಗಿದೆ.
ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್.ನಾಗರಾಜ್ (ಎಂ.ಟಿ.ಬಿ) ಪಿ.ಎಸ್.ಎ(ಆಕ್ಸಿಜನ್) ಘಟಕವನ್ನು ಉದ್ಘಾಟಿಸಲಿದ್ದಾರೆ.
ಶಾಸಕ ಟಿ.ವೆಂಕಟರಮಣಯ್ಯ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೆಗೌಡ, ಎಸ್.ರವಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಯಾದ ಪಿ.ಹೇಮಲತಾ, ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ಜಿ.ರೇಖಾ, ಉಪಾಧ್ಯಕ್ಷೆ ಪುಷ್ಪಲತಾ.ಕೆ.ಆರ್., ಸದಸ್ಯರಾದ ಚೈತ್ರ, ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು ಭಾಗವಹಿಸಲಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ|| ಕೋನ ವಂಶಿಕೃಷ್ಣ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಭಾಗವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….