ಬೆಂ.ಗ್ರಾ.ಜಿಲ್ಲೆ: ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶದನ್ವಯ, ಬ್ಯಾಂಕುಗಳು ಆಯ್ದ ಬ್ಯಾಂಕು ಶಾಖೆಗಳ ಮುಖಾಂತರ ಹಿರಿಯ ನಾಗರಿಕರ ಮನೆಬಾಗಿಲಿಗೆ ಬ್ಯಾಂಕಿನ ಮೂಲ ಸೇವಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಮಧುಸೂದನ್ ತಿಳಿದ್ದಾರೆ.
ಗ್ರಾಮಾಂತರ ಪ್ರದೇಶಗಳಲ್ಲಿ ಬ್ಯಾಂಕ್ ಮಿತ್ರರ ಮುಖಾಂತರ ಹಿರಿಯ ನಾಗರಿಕರು ವಾಸಿಸುವ ಪ್ರದೇಶದಲ್ಲಿನ ಅವರ ಮನೆ ಬಾಗಿಲವರೆಗೆ ಬ್ಯಾಂಕಿನ ಮೂಲ ಸೇವಾ ಸೌಲಭ್ಯಗಳನ್ನು ಒದಗಿಸುವ ವ್ಯವಸ್ಥೆ ಜಾರಿಯಲ್ಲಿದ್ದು, ಈ ಸೇವೆಗಳಿಗೆ ಬ್ಯಾಂಕಿನ ನಿಯಮಾನುಸಾರ ಸೇವಾ ಶುಲ್ಕವನ್ನು ವಿಧಿಸಲಾಗುವುದು.
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಘ್ರಣೀಯ ಬ್ಯಾಂಕಿನ ಎಲ್ಲಾ ಶಾಖೆಗಳು, ಹಿರಿಯ ನಾಗರಿಕರಿಗೆ ಆದ್ಯತೆ ಮೇರೆಗೆ ಸೇವೆ ನೀಡಲು ಹಾಗೂ ಪ್ರತ್ಯೇಕ ಸೇವಾ ಕೌಂಟರ್ ಮತ್ತು ಪ್ರತ್ಯೇಕ ಆಸನಗಳ ಸೌಲಭ್ಯ ಒದಗಿಸಲು ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..