ದೊಡ್ಡಬಳ್ಳಾಪುರ: ನಗರದ ಸಾರ್ವಜನಿಕ ಆಸ್ಪತ್ರೆ ಸಮೀಪದಲ್ಲಿ ಸುಮಾರು 1.5 ಕೋಟಿ ಪಿ.ಎಂ.ಕೇರ್ ಯೋಜನೆಯ ಅನುದಾನದಲ್ಲಿ ನಿರ್ಮಿಸದಲಾಗಿರುವ ಎರಡು ಸಾವಿರ ಲೀಟರ್ ಸಾಮರ್ಥ್ಯದ ಪಿ.ಎಸ್.ಎ(ಆಕ್ಸಿಜನ್) ಘಟಕವನ್ನು ಸಚಿವ ಎನ್.ನಾಗರಾಜ್ (ಎಂ.ಟಿ.ಬಿ), ಶಾಸಕ ಟಿ.ವೆಂಕಟರಮಣಯ್ಯ ಉದ್ಘಾಟಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ತಾಲೂಕಿನ ಅಭಿವೃದ್ಧಿ ಕಾರ್ಯಗಳ ಅನುದಾನ ತಡೆ ಕುರಿತು ಶಾಸಕ ಟಿ.ವೆಂಕಟರಮಣಯ್ಯ ಆರೋಪದ ಕುರಿತು ಪ್ರತಿಕ್ರಿಯೆ ನೀಡಿದ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್.ನಾಗರಾಜ್ (ಎಂ.ಟಿ.ಬಿ) ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕ್ಷೇತ್ರದಲ್ಲಿ ಕಡಿತ ಮಾಡಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ನಾಲ್ಕನೇ ನಂತರದಲ್ಲಿ ನಗರಸಭೆ, ಪುರಸಭೆ ಅಭಿವೃದ್ಧಿಗಡೆ ಸರ್ಕಾರದ ಅನುದಾನ ಬಿಡುಗಡೆ ಶೀಘ್ರವಾಗಿ ಆಗಲಿದೆ ಎಂದರು.
ಈ ವೇಳೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಆಡಳಿತಾಧಿಕಾರಿ ಡಾ.ರಮೇಶ್, ತಾಪಂ ಇಒ ಮುರುಡಯ್ಯ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..