ದೊಡ್ಡಬಳ್ಳಾಪುರ: ಎಲ್ಲಾ ರಾಜಕೀಯ ಪಕ್ಷಗಳ ಸಂಘಟನೆಗೆ ಸಂಘ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್.ನಾಗರಾಜ್ (ಎಂ.ಟಿ.ಬಿ) ತಿಳಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ಪಿ.ಎಸ್.ಎ(ಆಕ್ಸಿಜನ್) ಘಟಕ ಉದ್ಘಾಟನೆ ನಂತರ RSS ಕುರಿತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಕುರುತಾಗಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪ ಸಹಜ. ನಾ ಹೇಳಿದಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಏನಾದ್ರೂ ಹೇಳಲೇ ಬೇಕು. ಇಲ್ಲವಾದರೆ ನಾ ಹೇಳಿದ್ದೆ ಸರಿ ಎಂಬಂತಾಗುತ್ತದೆ. ದೇಶದಲ್ಲಿ ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳ ಸಂಘಟನೆಗೆ ಸಂಘ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹೊಸದಾಗಿ ಹುಟ್ಟಿದಲ್ಲ. ಸ್ವಾತಂತ್ರ್ಯ ಪೂರ್ವದಿಂದಲೂ ಸೇವಾ ಧರ್ಮದಿಂದ ಕಾರ್ಯನಿರ್ವಹಿಸುತ್ತಿದೆ. ಆದರೆ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಸಹಾಯಕರ ಮೇಲೆ ಆದಾಯ ಇಲಾಖೆ ಅಧಿಕಾರಿಗಳ ದಾಳಿ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಎನ್.ನಾಗರಾಜ್ (ಎಂ.ಟಿ.ಬಿ) ಆದಾಯ ತೆರಿಗೆ ಅಧಿಕಾರಗಳ ನಿರಂತರ ಪ್ರಕ್ರಿಯೆ ಇದಾಗಿದ್ದು, ತೆರಿಗೆ ವಂಚನೆ ಮಾಡುತ್ತಾರೋ ಅವರ ವಿರುದ್ಧ ತೆರಿಗೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡುತ್ತಾರೆ. ಅದರ ಹೊರತು ಹೆಚ್ಚಿನ ಮಾಹಿತಿ ತಿಳಿದಿಲ್ಲವೆಂದರು.
ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ / ಉಪಾಧ್ಯಕ್ಷ ಸ್ಥಾನದ ಆಯ್ಕೆ ಕುರಿತಾದ ಪ್ರಶ್ನೆಗೆ ಯಾವ ಮೆಜಾರಿಟಿ ಹೊಂದಿರುತ್ತೋ ಅವರು ಚುಕ್ಕಾಣಿ ಹಿಡಿಯುತ್ತಾರೆಂದು ನುಣಿಚಿಕೊಂಡರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..