ಬೆಂ.ಗ್ರಾ.ಜಿಲ್ಲೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಉದ್ಯೋಗಿನಿ ಮತ್ತು ಕಿರುಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಮಹಿಳಾ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉದ್ಯೋಗಿನಿ ಯೋಜನೆಯಡಿ ಸ್ವಯಂ ಉದ್ಯೋಗ ಮಾಡಲಿಚ್ಛಿಸುವಂತಹ 18-55 ವರ್ಷದೊಳಗಿನ, ಕುಟುಂಬದ ವಾರ್ಷಿಕ ಆದಾಯ ರೂ. 1,50,000/- ಕ್ಕಿಂತ ಕಡಿಮೆ ಇರುವಂತಹ ಸಾಮಾನ್ಯ ವರ್ಗದ ಮಹಿಳೆಯರು ಹಾಗೂ ರೂ. 2,00,000/-ಕ್ಕಿಂತ ಕಡಿಮೆ ಆದಾಯ ಹೊಂದಿರುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು, ಈ ಯೋಜನೆಯಡಿ ಬ್ಯಾಂಕ್ನಿಂದ ರೂ.1 ಲಕ್ಷದಿಂದ 3 ಲಕ್ಷಗಳವರೆಗೆ ಸಾಲ ಮತ್ತು ನಿಗಮದಿಂದ ಸಹಾಯಧನ ಸೌಲಭ್ಯವನ್ನು ಒದಗಿಸಲಾಗುವುದು.ಕಿರುಸಾಲ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ಮಹಿಳಾ ಸ್ವಸಹಾಯ ಸಂಘಗಳು, ಇತರೆ ವರ್ಗದ ಮಹಿಳಾ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳು ಆದಾಯೋತ್ಪನ್ನ ಚಟುವಟಿಕೆ/ ಸಣ್ಣ ಉದ್ದಿಮೆ ಕೈಗೊಳ್ಳಲು ಅರ್ಜಿ ಸಲ್ಲಿಸಬಹುದಾಗಿದ್ದು, ಈ ಯೋಜನೆಯಡಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ರೂ. 2,00,000 ಬಡ್ಡಿ ರಹಿತ ಸಾಲ ಒದಗಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ 2021ರ ಆಕ್ಟೋಬರ್ 30ರೊಳಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮತ್ತು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂ. 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕಿ ಅನಿತಾಲಕ್ಷ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….