ದೊಡ್ಡಬಳ್ಳಾಪುರ: ರಂಗಾಸಕ್ತಿ ಬೆಳೆಸಿಕೊಂಡು ಕೆಲಸ ಮಾಡುತ್ತಿರುವ ಯುವ ತಲೆಮಾರಿನ ಸಮರ್ಥರಿಗೆ ಬಿ.ವಿ.ಕಾರಂತರು ಆದರ್ಶ ದೀಪ ವಾಗಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥ ಆರಾಧ್ಯ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ತಾಲೂಕು ಕಲಾವಿದರ ಸಂಘದ ಸಹಯೋಗದಲ್ಲಿ ನಗರದ ಕಲಾಭವನ ದಲ್ಲಿ ಆಯೋಜಿಸಲಾಗಿದ್ದ ರಂಗಬೀಷ್ಮ ಬಿ.ವಿ.ಕಾರಂತರ ಜನ್ಮದಿನದ ಅಂಗವಾಗಿ ಭಾರತೀಯ ರಂಗಸಂಗೀತ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಬಿ.ವಿ.ಕಾರಂತರು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತರಲ್ಲ. ದೇಶದ ಅನೇಕ ಕಡೆಗಳಲ್ಲಿ ಕೆಲಸ ಮಾಡಿದ ಅನುಭವಿಗಳು. ಬಡ ಕುಟುಂಬದಲ್ಲಿ ಜನಿಸಿ, ರಂಗಭೂಮಿಯನ್ನು ಉಳಿಸಿ, ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಕಾರಂತರು ಅತ್ಯಂತ ಸರಳ, ಪಾದರಸ ಸದೃಶ್ಯ ವ್ಯಕ್ತಿತ್ವವನ್ನು ಹೊಂದಿದ್ದರು ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಕಲಾವಿದರ ಸಂಘದ ಅಧ್ಯಕ್ಷ ಗುಡ್ಡದಳ್ಳಿ ರಾಮಾಂಜಿನಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಚಂದ್ರಶೇಖರ್, ಸಲಹಾ ಸಮಿತಿಯ ಎನ್.ವೆಂಕಟೇಶ್ ಮತ್ತು ಸಂಘದ ಪದಾಧಿಕಾರಿಗಳು ಬಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….