ದೊಡ್ಡಬಳ್ಳಾಪುರ: ಪ್ರದಾನಿ ನರೇಂದ್ರ ಮೋದಿಯವರ 71ನೇ ಹುಟ್ಟು ಹಬ್ಬದ ಪ್ರಯುಕ್ತ ತಾಲೂಕಿನ ಜಿ.ಹೊಸಹಳ್ಳಿಯಲ್ಲಿ ಸೇವಾ ಸಮರ್ಪಣೆ ಅಭಿಯಾನ ನಡೆಯಿತು.
ಅಭಿಯಾನದ ಅಂಗವಾಗಿ ಪ್ರತಿಭಾ ಪುರಸ್ಕಾರ, ಸ್ಥಳೀಯ ಪ್ರತಿಭೆಗಳನ್ನು ಸನ್ಮಾನ ಹಾಗೂ ಹೊಸಹಳ್ಳಿ ಪಂಚಾಯಿತಿಗೆ ಸೇರಿದ ಫಲಾನುಭವಿಗಳು ಧನ್ಯವಾದ ಮೋದಿಜೀ ಎಂದು ಬರೆದು ಪೋಸ್ಟ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ವೇಳೆ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪಾಧ್ಯಕ್ಷ ಎಚ್.ಎಸ್.ಅಶ್ವತ್ ನಾರಾಯಣ ಕುಮಾರ್ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ಅವಧಿಯಲ್ಲಿ ರಾಜಕೀಯ ಕೇವಲ ಅಧಿಕಾರವಾಗಿರದೇ ಸಾಮಾಜಿಕ ಸೇವಾ ಕ್ಷೇತ್ರಕ್ಕೂ ವ್ಯಾಪಿಸಿದ ವಿಷಯವಾಗಿದೆ.
ಭಾರತೀಯ ಜನತಾ ಪಕ್ಷವು ಇತರೆ ರಾಜಕೀಯ ಪಕ್ಷಗಳಿಗಿಂತ ಭಿನ್ನವಾಗಿದ್ದು ತನ್ನ ಸಿದ್ಧಾಂತ ಮತ್ತು ತತ್ವಗಳಿಂದ ಮುಖಂಡರಿಂದ ಕಾರ್ಯಕರ್ತರವರೆಗೆ ಸಾಮಾಜಿಕ ಸೇವೆಯಲ್ಲಿ ತೊಡಗುವಂತೆ ಪ್ರೇರಣೆ ನೀಡುತ್ತದೆ ಅಲ್ಲದೇ ಅಧಿಕಾರ ಇರಲಿ ಇಲ್ಲದಿರಲಿ ಯಾವುದೇ ಕಾರಣಕ್ಕೂ ಸೈದ್ಧಾಂತಿಕ ವಿಷಯದಲ್ಲಿ ರಾಜಿಯಾಗುವುದಿಲ್ಲ ಎಂದು ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನ ಸೆ.17ರಿಂದ ಮತ್ತು ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ದಿನ ಅಕ್ಟೋಬರ್ 7ರ ವರೆಗೆ ಭಾರತೀಯ ಜನತಾ ಪಕ್ಷ ದೇಶಾದ್ಯಂತ ಸೇವೆ ಮತ್ತು ಸಮರ್ಪಣೆ ಅಭಿಯಾನ ಹಮ್ಮಿಕೊಂಡಿತ್ತು.
ಅಭಿಯಾನದ ಅಂಗವಾಗಿ ಸಸಿ ನೆಡುವುದು, ರಕ್ತದಾನ, ಕಲ್ಯಾಣಿ ಸ್ವಚ್ಛತೆ, ಉಚಿತ ಆರೋಗ್ಯ ತಪಾಸಣೆ ಶಿಬಿರ, ನೇತ್ರ ತಪಾಸಣಾ ಶಿಬಿರ ಸೇರಿದಂತೆ ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಾನಂದ ರೆಡ್ಡಿ, ಭಕ್ತರಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸಿದ್ದಲಿಂಗಪ್ಪ, ಸದಸ್ಯರಾದ ಉಮೇಶ್, ರವಿಕುಮಾರ್, ರಾಜಣ್ಣ, ಹೋಬಳಿ ಅಧ್ಯಕ್ಷ ಕದಿರೇಗೌಡ, OBC ಮೋರ್ಚಾ ಕಾರ್ಯದರ್ಶಿ ಹರೀಶ್ , SC ಮೋರ್ಚಾ ತಾಲ್ಲೂಕು ಉಪಾಧ್ಯಕ್ಷರಾದ ವೆಂಕಟರಾಜು, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ನರಸಿಂಹಮೂರ್ತಿ, ಬಗರ್ ಹುಕುಂ ಸಮಿತಿ ಸದಸ್ಯ ಪ್ರಕಾಶ್ ರೆಡ್ಡಿ, ಗ್ರಾಪಂ ಮಾಜಿ ಸದಸ್ಯೆ ರೋಹಿಣಿ ಗೋವಿಂದರಾಜು, ಮುಖಂಡರಾದ ಕಲ್ಲುಕುಂಟೆ ನಾಗರಾಜ್ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….