ಸೇವಾಸಿಂಧು ತಂತ್ರಾಂಶದಲ್ಲಿ ನೊಂದಣಿ ಮಾಡಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಿರಿ: ನ್ಯಾ.ಭೈರಪ್ಪ ಶಿವಲಿಂಗ ನಾಯಿಕ

ಚಿಕ್ಕಬಳ್ಳಾಪುರ: ಅಸಂಘಟಿತ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಆ ಸೌಲಭ್ಯಗಳನ್ನು ಸೇವಾಸಿಂಧು ತಂತ್ರಾಂಶದಲ್ಲಿ ನೊಂದಣಿ ಮಾಡಿಸಿಕೋಳ್ಳುವ ಮೂಲಕ  ಕಾರ್ಮಿಕರು  ಸದ್ವಿನಿಯೋಗಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಭೈರಪ್ಪ ಶಿವಲಿಂಗ ನಾಯಿಕ ಅವರು ಮನವಿ ಮಾಡಿದರು.

Guarantee scheme
ಎನ್ ವಿಶ್ವನಾಥ್

ಅವರು ಶುಕ್ರವಾರ ಜಿಲ್ಲಾ ನ್ಯಾಯಾಲಯದಲ್ಲಿ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರ್ಮಿಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ  ಹಮ್ಮಿಕೊಂಡಿದ್ದ  ಅಸಂಘಟಿತ ವಲಯದ ಕಾರ್ಮಿಕರ ಹಕ್ಕುಗಳ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದರು.

ಇ-ಶ್ರಮ್ ಯೋಜನೆ ಅಡಿಯಲ್ಲಿ ನೊಂದಣಿ ಮಾಡಿಸಿಕೊಂಡರೆ 1 ವರ್ಷಕ್ಕೆ ಪಿ.ಎಂ.ಎಸ್,ಬಿ.ವೈ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.  ಕೆಲಸದ ಸಂದರ್ಭದಲ್ಲಿ ಕಾರ್ಮಿಕರ ಆಕಸ್ಮಿಕ ಸಾವು ಸಂಭವಿಸಿದಾಗ 2 ಲಕ್ಷ ಹಣವನ್ನು ನೀಡಲಾಗುತ್ತದೆ,ಅಂಗವೈಕಲ್ಯಕ್ಕೆ 1 ಲಕ್ಷ ಹಣವನ್ನು ನೀಡಲಾಗುತ್ತದೆ ಎಂದರು.

ನೊಂದಣಿ ಹೇಗೆ: ಜಿಲ್ಲೆಯಾದ್ಯಂತ 170  ಸಾಮಾನ್ಯ ಸೇವಾ ಕೇಂದ್ರಗಳಿವೆ.16 ರಿಂದ 59 ವರ್ಷದೊಳಗಿನ ವಯೋಮಾನದವರು   ಆಧಾರ್  ಕಾರ್ಡ್ ,ಸಕ್ರಿಯ ಬ್ಯಾಂಕ್ ಖಾತೆ ಪಾಸ್ ಬುಕ್ ಮತ್ತು ಸಕ್ರಿಯ ದೂರವಾಣಿ ಸಂಖ್ಯೆಯೊಂದಿಗೆ  ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಉಚಿತವಾಗಿ   ನೋಂದಣಿ ಮಾಡಿಸಿಕೊಳ್ಳಬಹುದು.ಅಥವಾ ಕಾರ್ಮಿಕರೇ ನೇರವಾಗಿ  ಸೇವಾಸಿಂಧು ತಂತ್ರಾಂಶದ ಮೂಲಕ  ನೊಂದಣಿ ಮಾಡಿಕೊಳ್ಳಬಹುದು ಇಲ್ಲವೇ ಜಿಲ್ಲಾ, ತಾಲ್ಲೂಕು ಮಟ್ಟದ ಕಾರ್ಮಿಕ ಇಲಾಖೆ ಕಚೇರಿಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆದು ನೊಂದಣಿ ಮಾಡಿಕೊಳ್ಳಬಹುದು ಎಂದರು.  

ಅನುಕೂಲಗಳೇನು: ಅಸಂಘಟಿತ ಕಾರ್ಮಿಕರು ನೊಂದಣಿಯಾಗಿದ್ದರೆ ಸರ್ಕಾರದ ಎಲ್ಲಾ  ಕಾರ್ಮಿಕ  ಕಲ್ಯಾಣ ಕಾರ್ಯಕ್ರಮಗಳ ಸೌಲಭ್ಯಗಳನ್ನು dbt ಮುಖಾಂತರ  ಪಡೆಯಬಹುದು ಹಾಗೂ ಮುಂದಿನ ದಿನಗಳಲ್ಲಿ ಅರ್ಜಿ ಸಲ್ಲಿಸದೆ ಕಾರ್ಮಿಕ  ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನ ಪಡೆಯಬಹುದು . ಉಚಿತ ಆರೋಗ್ಯ ಸೇವೆ,ಕಾರ್ಮಿಕ ಕಲ್ಯಾಣ ನಿಧಿಯಿಂದ ಹಣಕಾಸಿನ ನೆರವು, ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಾಲ ಸೌಲಭ್ಯ, ವಿವಾಹ  ಸಹಾಯ ಧನ, ಪಿಂಚಣಿ  ಸೌಲಭ್ಯಗಳನ್ನು  ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯಾದರ್ಶಿಯಾದ ಲಕ್ಷ್ಮೀಕಾಂತ್ ಜೆ.ಮಿಸ್ಕಿನ್  ಅವರು ಮಾತನಾಡಿ,ಅಸಂಘಟಿತ ಕಾರ್ಮಿಕರ ಕಲ್ಯಾಣ ದೃಷ್ಟಿಯಿಂದ ಅಸಂಘಟಿತ ಕೆಲಸಗಾರರ ಸಾಮಾಜಿಕ ಭದ್ರತಾ ಅಧಿನಿಯಮ  ಜಾರಿಗೆ ಬಂದಿದೆ. ಕಾನೂನು ಜಾರಿಯಾದರೂ ಅಸಂಘಟಿತ ಕಾರ್ಮಿಕರಿಗೆ ಕಾನೂನಿನ ಅರಿವಿನ ಕೊರತೆಯಿಂದ ಬಹಳಷ್ಟು ಅಸಂಘಟಿತ ಕಾರ್ಮಿಕರು ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ, ಕರೊನಾ ಸಂದರ್ಭದಲ್ಲಿ ಎಲ್ಲಾ ಕೆಲಸ ಕಾರ್ಯಗಳು ಸ್ತಬ್ದವಾಗಿದ್ದವು. ಇದರಿಂದ ಜೀವನ ನಡೆಸುವುದು ತುಂಬಾ ಕಷ್ಟವಾಯಿತು ಅದರಲ್ಲೂ ಅಸಂಘಟಿತ ಕಾರ್ಮಿಕರು ಸ್ಥಿತಿ  ದುಸ್ತರವಾಗಿತ್ತು  . ಕೋವಿಡ್ ನಿಂದ  ಹೆಚ್ಚಿಗೆ ತೊಂದರೆಗೆ ಒಳಗಾದವರು ಅಸಂಘಟಿತ ವಲಯದ ಕಾರ್ಮಿಕರೇ ಆಗಿದ್ದಾರೆ. ಕನಿಷ್ಠ ಮಟ್ಟದ ಜೀವನ ಸಾಗಿಸಲು ಕಾರ್ಮಿಕರು ಕಠಿಣ ಶ್ರಮವಹಿಸಿ ದುಡಿಯುತ್ತಾರೆ. ಅಂತಹವರಿಗಾಗಿ ಸರ್ಕಾರ ವಿಶೇಷ ಕಲ್ಯಾಣ  ಕಾರ್ಯಕ್ರಮಗಳನ್ನು  ಜಾರಿಗೆ ತಂದಿದೆ. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ಸಿಗುವಂತಾಗಬೇಕು ಎಂದರು.

ಸೇವಾಸಿಂಧು ತಂತ್ರಾಂಶದಲ್ಲಿ  ಕಾರ್ಮಿಕರು  ನೊಂದಣಿಯಾಗಿದ್ದರೆ ಸರ್ಕಾರದ ಎಲ್ಲಾ  ಕಾರ್ಮಿಕ  ಕಲ್ಯಾಣ ಕಾರ್ಯಕ್ರಮಗಳ ಸೌಲಭ್ಯಗಳನ್ನು dbt ಮುಖಾಂತರ  ಪಡೆಯಬಹುದು. ಸೌಲಭ್ಯ ಪಡೆಯಲು ಬೇರೆ ಯಾರನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ನೇರವಾಗಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಂದು ತಲುಪುತ್ತದೆ ಎಂದರು. ಈ ವೇಳೆ ನೋಂದಣಿಯಾಗಿರುವ ಅಸಂಘಟಿತ ಕಾರ್ಮಿಕರಿಗೆ ನೋಂದಣಿ ಪತ್ರ,ಸ್ಮಾರ್ಟ್ ಕಾರ್ಡನ್ನು ,ಕೋವಿಡ್  ಸುರಕ್ಷತಾ ಕಿಟ್ ಗಳನ್ನು  ನ್ಯಾಯಾಧೀಶರು ವಿತರಿಸಿದರು.

ಕಾರ್ಮಿಕ ನೀರೀಕ್ಷಕರಾದ ಮಂಜುಳ ಅವರು ಮಾತನಾಡಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಕಲ್ಯಾಣ ಭದ್ರತಾ ಮಂಡಳಿಯಿಂದ ಅಸಂಘಟಿತ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ಒದಗಿಸಿ ಕೊಡಲಾಗುತ್ತಿದೆ. ಸಂಘಟಿತ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರಿಗೆ ESI, PF ಸೌಲಭ್ಯವಿರುತ್ತದೆ. ಅಸಂಘಟಿತ ಕಾರ್ಮಿಕರು ಇದರಿಂದ ವಂಚಿತರಾಗುತ್ತಾರೆ.ಅಸಂಘಟಿತ ವಲಯದ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡೇಟಾಬೇಸ್ ನಲ್ಲಿ ನೊಂದಣಿ ಆದರೆ, ರಾಜ್ಯ  ಮತ್ತು ಕೇಂದ್ರ ಸರ್ಕಾರದ ಯಾವುದೇ  ಪರಿಹಾರ ಕುರಿತು ಆದೇಶವಾದರೆ ಆ ಯೋಜನೆಗಳ ಸೌಲಭ್ಯವನ್ನು ಸಹ ಕಾರ್ಮಿಕರು ನೇರವಾಗಿ ಪಡೆಯಬಹುದು ಎಂದರು. 

ಕಾರ್ಯಕ್ರಮದಲ್ಲಿ, ವಕೀಲರಾದ ಎಸ್ ಸುದರ್ಶನ್ ಮತ್ತು ಕೆ.ಸಿ ಪ್ರಕಾಶ್ ಅಸಂಘಟಿತ ಕಾರ್ಮಿಕರ ಹಕ್ಕುಗಳ ಬಗ್ಗೆ ತಿಳಿಸಿಕೊಟ್ಟರು. ಅಸಂಘಟಿತ ಕಾರ್ಮಿಕರು ಹಾಗೂ ಅಧಿಕಾರಿಗಳು/ಸಿಬ್ಬಂದಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!