ದೊಡ್ಡಬಳ್ಳಾಪುರ: ಮಳೆಯಿಂದಾಗಿ ತುಂಬಿ ಹರಿದ ಸಾಸಲು ಗ್ರಾಮಪಂಚಾಯಿತಿ ವ್ಯಾಪ್ತಿಯ ಮೂರು ಕರೆಗಳಿಗೆ ಶಾಸಕ ಟಿ.ವೆಂಕಟರಮಣಯ್ಯ ಸ್ಥಳೀಯ ಜನಪ್ರತಿನಿದಿಗಳೊಂದಿಗೆ ಬಾಗಿನ ಅರ್ಪಿಸಿದರು.
ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಾಸಲು ಗ್ರಾಮಪಂಚಾಯಿತಿ ವ್ಯಾಪ್ತಿಯ ಚೆನ್ನವೀರನಹಳ್ಳಿ, ತೋಡಲಬಂಡೆ, ಮಚ್ಚೇನಹಳ್ಳಿ ಕೆರೆಗಳು ತುಂಬಿ ಕೋಡಿ ಹರಿದ ಹಿನ್ನೆಲೆಯಲ್ಲಿ ಇಂದು ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಲಾಯಿತು.
ಟಿಎಪಿಎಂಸಿ ಎಸ್ ಅಧ್ಯಕ್ಷ ಸಿದ್ದರಾಮಣ್ಣ, ಸಾಸಲು ಗ್ರಾಪಂ ಅಧ್ಯಕ್ಷ ಮಾರೇಗೌಡ, ಉಪಾಧ್ಯಕ್ಷ ಆನಂದ್, ಪಿಡಿಒ ತಿರುಪತಿ, ಸದಸ್ಯರಾದ ಶೃತಿ ರವಿಚಂದ್ರ, ನಾಗರತ್ನ ಪ್ರಕಾಶ್, ನರಸಮ್ಮ ರಾಮಯ್ಯ, ಗೋವಿಂದರಾಜು, ಈರಣ್ಣ, ಲತಾಲಕ್ಕಪ್ಪ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪೂರು ಬೈರೇಗೌಡ ಮತ್ತಿತರರು ಬಾಗಿನ ಕಾರ್ಯಕ್ರಮದಲ್ಲಿ ಶಾಸಕರ ಜೊತೆಯಾದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….