ದೊಡ್ಡಬಳ್ಳಾಪುರ: ಕೆಲ ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಹಲವು ಕೆರೆಗಳಿಗೆ ನೀರು ಬಂದಿದೆ.
ಮಳೆಯಿಂದಾಗಿ ಗುಂಡಮಗೆರೆ, ಚೆನ್ನವೀರನಹಳ್ಳಿ, ತೋಡಲಬಂಡೆ, ಮಚ್ಚೇನಹಳ್ಳಿ ಕೆರೆ ತುಂಬಿ ಕೋಡಿ ಹರಿದಿದ್ದರೆ, ಹಲವು ಕೆರೆಗಳು ತುಂಬಲು ಕೆಲವು ಅಡಿ ಮಾತ್ರ ಉಳಿದಿದೆ.
ಈ ಹಿನ್ನೆಲೆಯಲ್ಲಿ ಇಂದು ಶಾಸಕ ಟಿ.ವೆಂಕಟರಮಣಯ್ಯ ಚೆನ್ನವೀರನಹಳ್ಳಿ, ತೋಡಲಬಂಡೆ ಹಾಗೂ ಮಚ್ಚೇನಹಳ್ಳಿ ಕರೆಗಳಿಗೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ಸೋಮವಾರ ಗುಂಡಮಗೆರೆ ಕೆರೆಗೆ ಬಾಗಿನ ಅರ್ಪಿಸಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….