ಬೆಂ.ಗ್ರಾ.ಜಿಲ್ಲೆ: 2020-21ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು 2021ರ ಅಕ್ಟೋಬರ್ 21 ರಿಂದ 23ರವರೆಗೆ ಮೂರು ದಿನಗಳ ಕಾಲ ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ವಿಜೇತರಾದ ನೌಕರರು ಆನ್‌ಲೈನ್ ಮೂಲಕ ಮಾಹಿತಿ ಸಲ್ಲಿಸುವುದು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ವೈಯಕ್ತಿಕ ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ನೌಕರರು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡದ ನೌಕರರು 2021ರ ಅಕ್ಟೋಬರ್ 21 ರಂದು ಮಧ್ಯಾಹ್ನ 3.00 ಗಂಟೆಗೆ ದಾವಣಗೆರೆಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಎಲ್ಲಾ ಕ್ರೀಡಾಪಟುಗಳು ಪಥಸಂಚಲನದಲ್ಲಿ ಭಾಗವಹಿಸುವುದು ಹಾಗೂ ಆನ್‌ಲೈನ್‌ನಲ್ಲಿ http://bit.ly/ksgeasportsreg ಕಡ್ಡಾಯವಾಗಿ ಮಾಹಿತಿಯನ್ನು ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.