ಗುಂಡಮಗೆರೆ ಕೆರೆಗೆ ಬಾಗಿನ ಅರ್ಪಿಸಿದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಶಾಸಕ ಟಿ.ವೆಂಕಟರಮಣಯ್ಯ / 15 ದಿನಗಳಲ್ಲಿ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ಭರವಸೆ

ದೊಡ್ಡಬಳ್ಳಾಪುರ: ತಾಲೂಕಿನ ಎಂದೂ ಬತ್ತದ ಕೆರೆಯೆಂದ ಪ್ರಖ್ಯಾತಿ ಪಡೆದಿರುವ ಗುಂಡಮಗೆರೆ ಕೆರೆ ಕೋಡಿ ಬಿದ್ದಿರುವ ಹಿನ್ನೆಲೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಶಾಸಕ ಟಿ.ವೆಂಕಟರಮಣಯ್ಯ ಇಂದು ಕೆರೆಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.

ಈ ವೇಳೆ ಮಾತನಾಡಿದ ಶಾಸಕ‌ ಟಿ.ವೆಂಕಟರಮಣಯ್ಯ, ಈ ವರ್ಷ ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೆರೆಗಳು ತುಂಬಿ ಕೋಡಿ ಬಿದ್ದಿರುವುದು ರೈತರಲ್ಲಿ ಸಂತಸಕ್ಕೆ ಕಾರಣವಾಗಿದೆ. ಈ ಹಿಂದೆ ಗುಂಡಮಗೆರೆ ಕೆರೆ ತುಂಬಿದಾಗ ಹೊಸಹಳ್ಳಿ ಹಾಗೂ ನಿಂಗನಾಯಕನ ಕೆರೆಗೆ ನೀರು ಹರಿಯಲು ರಾಜ ಕಾಲುವೆಯಿದ್ದು ನೀರು ಹರಿಸಲು ಕ್ರಮಕೈಗೊಳ್ಳುವಂತೆಡ ಸ್ಥಳೀಯರು ‌ಮನವಿ ಮಾಡಿದ್ದರು. ಆ ಸಂದರ್ಭದಲ್ಲಿ ಕೈಗೊಂಡ ಕಾಮಗಾರಿಯಿಂದ ಹೊಸಹಳ್ಳಿ ಭಾಗದ ರೈತರಿಗೆ ಅನುಕೂಲವಾಗಿದೆ.

ಗುಂಡಮಗೆರೆ ಕೆರೆಯ ಮುಂಬಾಗದ ಜಮೀನು, ಮಾಕಳಿ ಬೆಟ್ಟಕ್ಕೆ ತೆರಳಲು ಮೇಲ್ಸೇತುವೆ ನಿರ್ಮಾಣ ಅಗತ್ಯವಾಗಿದೆ. ಅಲ್ಲದೆ ಕೋಡಿ ಹರಿದು ವ್ಯರ್ಥವಾಗಿ ನೀರು ಹರಿದು ಹೋಗದಂತೆ, ತಾಲೂಕಿನಲ್ಲಿ ಬೀಳುವ ಮಳೆ ನೀರನ್ನು ಸಂಗ್ರಹಿಸಿ ಅಂತರ್ಜಲ ಹೆಚ್ಚಿಸಲು ಚೆಕ್ ಡ್ಯಾಂ ನಿರ್ಮಿಣ, ಹೊಸಹಳ್ಳಿ ಕೆರೆಗೆ ನೀರು ಸಮರ್ಪಕವಾಗಿ ಹರಿಯಲು ಚಾನಲ್ ನಿರ್ಮಾಣ ಹಾಗೂ ಹಲವು ವರ್ಷಗಳಿಂದ ನಿರ್ಮಾಣವಾಗದೆ ಜನರಿಗೆ ತೊಂದರೆಗೆ ಕಾರಣವಾಗಿರುವ ಕೊಟ್ಟಿಗೆಮಾಚೇನಹಳ್ಳಿ ಸೇತುವೆ ನಿರ್ಮಾಣಕ್ಕೆ ಜಿಲ್ಲಾಡಳಿತ ತ್ವರಿತವಾಗಿ ಕ್ರಮಕೈಗೊಳ್ಳುವಂತೆ ವೆಂಕಟರಮಣಯ್ಯ ಮನವಿ ಮಾಡಿದರು.

ತಾಲೂಕಿನ ನೀರಾವರಿ ಯೋಜನೆಗಳಿಗೆ ತಡೆಯೊಡ್ಡಲಾಗುತ್ತಿದೆ. ಹಿಂದಿನ ಸರ್ಕಾರದಲ್ಲಿ ತ್ಯಾಜ್ಯ ಸಂಸ್ಕರಣೆ ನೀರನ್ನು ಹರಿಸಲು 120 ಕೆರೆಗಳನ್ನು ಸೇರ್ಪಡೆ ಮಾಡಲಾಗಿತ್ತು. ಆದರೆ ಈ ಸರ್ಕಾರ ಮತ್ತೆ ಮೂರು ಹಂತ ಕಾಮಗಾರಿಗೆ ಮುಂದಾಗಿ ದೊಡ್ಡಬಳ್ಳಾಪುರ ತಾಲೂಕನ್ನು ಕಡೆಗಣಿಸಿದ್ದು ತಾಲೂಕಿನ ಜನತೆ ಪಕ್ಷಾತೀತವಾಗಿ ಹೋರಾಟಕ್ಕೆ ಸಿದ್ದವಾಗಬೇಕಿದೆ ಎಂದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಬಾಗಿನ ಕಾರ್ಯಕ್ರಮಕ್ಕೆ ಕರೆಸಿದ ಶಾಸಕರು ಹಲವು ಬೇಡಿಕೆ ಇಡುತ್ತಿದ್ದಾರೆಂದು ಹಾಸ್ಯ ಚಟಾಕಿ ಹಾರಿಸಿ. ರೈತರ ಸಮಸ್ಯೆ ಪರಿಗಣಿಸಿ ಸೇತುವೆ ನಿರ್ಮಾಣಕ್ಕೆ ಎಸ್ಟಿಮೇಟ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಂದಿನ 15 ದಿನಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‍

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಟಿ.ಎಸ್.ಶಿವರಾಜ್, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಇಒ ಟಿ.ಮುರುಡಯ್ಯ, ಟಿಎಪಿಎಸ್ ಅಧ್ಯಕ್ಷ ಸಿದ್ದರಾಮಣ್ಣ, ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ವೆಂಕಟಾಚಲಯ್ಯ, ತಾಪಂ ಮಾಜಿ ಉಪಾಧ್ಯಕ್ಷೆ ಪದ್ಮಾವತಿ ಅಣ್ಣಯ್ಯಪ್ಪ,  ಗ್ರಾಪಂ‌ ಮಾಜಿ ಅಧ್ಯಕ್ಷೆ ವಿಮಲಾಜಯರಾಂ, ಹೊಸಹಳ್ಳಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮೀ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್, ಪಿಡಿಒ ನಾಗರಾಜ್, ಮುಖಂಡರಾದ ಅಣ್ಣಯ್ಯಪ್ಪ, ಓಜೇನಹಳ್ಳಿ ಕಿಟ್ಟಿ, ಜಯರಾಂ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!