ದೊಡ್ಡಬಳ್ಳಾಪುರ: ಕೆಲ ದಿನಗಳಿಂದ ನಂದಿ ಸುತ್ತ ಮುತ್ತಲಿನ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ, ಜಕ್ಕಲಮೊಡಗು ಜಲಾಶಯ ತುಂಬಿ ಹರಿಯುತ್ತಿದೆ.
ಜಲಾಶಯದ ಹಿನ್ನೀರಿನ ಮಟ್ಟ ಹೇರಿಕೆಯಾಗಿ ಗುಂಗೀರ್ಲಹಳ್ಳಿ ಬಳಿಯ ಚಿಕ್ಕಬಳ್ಳಾಪುರ – ದೊಡ್ಡಬಳ್ಳಾಪುರ ಸಂಪರ್ಕ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಪ್ರಯಾಣಿಕರು ದಿನನಿತ್ಯ ಜೀವ ಕೈಯಲ್ಲಿಡಿದು ಓಡಾಡಬೇಕಾದ ಅನಿರ್ವಾರ್ಯತೆ ಎದುರಾಗಿದೆ.
ಚಿಕ್ಕಬಳ್ಳಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಜಕ್ಕಲಮೊಡಗು, ಗುಂಗೀರ್ಲ ಹಳ್ಳಿ ದೊಡ್ಡಬಳ್ಳಾಪುರ ತಾಲೂಕಿನ ಬಾಲೇನಹಳ್ಳಿ ಮುಂತಾದ ಗ್ರಾಮಗಳಿಗೆ ದೊಡ್ಡಬಳ್ಳಾಪುರ – ಚಿಕ್ಕಬಳ್ಳಾಪುರ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಆದರೆ ಸೇತುವೆ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಗ್ರಾಮಸ್ಥರು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ.
ಈ ಗ್ರಾಮಗಳಿಗೆ ಒಂದು ಬಾರಿ ಬರುವ ಸರ್ಕಾರಿ ಬಸ್ ಕೂಡ ಬರುವುದನ್ನು ನಿಲ್ಲಿಸಿದ್ದು, ವಿದ್ಯಾರ್ಥಿಗಳು ಶಾಲಾ – ಕಾಲೇಜುಗಳಿಗೆ ತೆರಳಲು ಸೇತುವೆ ಮೇಲೆ ಅಪಾಯಕಾರಿ ಮಟ್ಟದಲ್ಲಿ ಹರಿಯುವ ನೀರಿನಲ್ಲೆ ನಡೆದುಕೊಂಡು ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ.
ಯಾವುದೇ ಅಹಿತಕರ ಘಟನೆ ಸಂಭವಿಸುವ ಮುನ್ನ ಅಧಿಕಾರಿಗಳು ಹೆಚ್ಚಿತ್ತು, ಸುಗಮ ಸಂಚಾರಕ್ಕೆ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…