ದೊಡ್ಡಬಳ್ಳಾಪುರ: ಇಂದು ನಗರದ ಹೊರವಲಯದ ಟಫೆ ಕಾರ್ಖಾನೆಯಲ್ಲಿ ಅವಘಡ ಸಂಭವಿಸಿ, ವಿದ್ಯಾರ್ಥಿ ಸಾವನಪ್ಪಿದ ಪ್ರಕರಣದ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಗೆ ಕಾರಣವಾದವರ ವಿರುದ್ಧ ಕ್ರಮ ಹಾಗೂ ವಿದ್ಯಾರ್ಥಿ ಸಾವಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಎಂದು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಕಾರ್ಖಾನೆಯ ಮುಂಭಾಗ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣ್ಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ, ಕೇವಲ ಹತ್ತು ಹದಿನೈದು ದಿನಗಳ ಹಿಂದೆ ಹೊರ ರಾಜ್ಯದಿಂದ ಕರೆತಂದ ಅನನುಭವಿ ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ, ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಅಪಾಯಕಾರಿ ಯಂತ್ರದ ಬಳಿ ಕೆಲಸಕ್ಕೆ ನೇಮಿಸಿದ ಕಾರಣದಿಂದ ಸಾವು ಸಂಭವಿಸಿದೆ. ಇದಕ್ಕೆ ಕಾರಣರಾದ ಅಧಿಕಾರಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅವರ ಕುಟುಂಬಕ್ಕೆ ನ್ಯಾಯಯುತವಾದ ಪರಿಹಾರ ನೀಡ ಬೇಕಿದೆ. ಅಲ್ಲದೆ ಮತ್ತೆ ಈ ರೀತಿಯ ಅವಘಡಗಳು ಸಂಭವಿಸದಂತೆ ಸೂಕ್ತ ಕ್ರಮ ಕೈ ಗೊಳ್ಳಬೇಕು ಹಾಗೂ ಕಾರ್ಮಿಕರ ಇತರ ನ್ಯಾಯಯುತ ಬೇಡಿಕೆಗಳನ್ನು ಪೂರೈಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಡಿವೈಎಸ್ಪಿ ಟಿ.ರಂಗಪ್ಪ ಸ್ಥಳಕ್ಕೆ ಭೇಟಿ ನೀಡಿ ಆಡಳಿತ ಮಂಡಳಿ ಹಾಗೂ ಕಾರ್ಮಿಕ ಸಂಘಟನೆ ನಡುವೆ ಸಭೆ ನಡೆಸಿ ಪರಿಹಾರಕ್ಕೆ ಕ್ರಮ ಹಾಗೂ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮದ ಭರವಸೆ ನಂತರ ಪ್ರತಿಭಟನೆ ಮೊಟಕುಗೊಳಿಸಿದರು.
ಸ್ಥಳದಲ್ಲಿ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ತಾಲ್ಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್,ಪ್ರಧಾನ ಕಾರ್ಯದರ್ಶಿ ಎಸ್ಎಲ್ಎನ್ ವೇಣು, ಕಾನೂನು ಸಲಹೆಗಾರರಾದ ಮಲ್ಲಾತಹಳ್ಳಿ ಆನಂದ್ ಹಾಗೂ ಕಾರ್ಮಿಕರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….