ದೊಡ್ಡಬಳ್ಳಾಪುರ: ಚೆಕ್ ಡ್ಯಾಂ ನಿರ್ಮಾಣದಿಂದಾಗಿ ಅಂತರ್ಜಲ ವೃದ್ಧಿಯಾಗುವುದಲ್ಲದೇ, ನೀರಿನ ಸಂಗ್ರಹಣೆಯ ಪ್ರಮಾಣ ಹೆಚ್ಚಾಗುತ್ತದೆ. ಇದರಿಂದ ದೊಡ್ಡಬಳ್ಳಾಪುರ ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವು ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯ ಮೂಲಕ ಕುಡಿಯುವ ನೀರನ್ನು ಜನರಿಗೆ ತಲುಪಿಸಬಹುದು ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.
ತಾಲ್ಲೂಕಿನ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರವೆಹಳ್ಳದ ನೀರು ಪೋಲಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡುವ ಉದ್ದೇಶದಿಂದ ಇಂದು ಸ್ಥಳ ಪರಿಶೀಲನೆ ನಡೆಸಿ, ಅವರು ಮಾತನಾಡಿದರು.
ಆಂಧ್ರಪ್ರದೇಶದ ಗಡಿ ಭಾಗದ ಕೃಷ್ಣ ನದಿ ಪಾತ್ರದಲ್ಲಿನ ಕರ್ನಾಟಕದ 20 ಕಿ.ಮೀ ನ ಎಲ್ಲಾ ಭಾಗದಲ್ಲೂ ಅಂತರ್ಜಲ ವೃದ್ಧಿಸಿದ್ದು, ಆ ಪ್ರದೇಶದಲ್ಲಿ ನೀರು ಸುಲಭವಾಗಿ ಲಭ್ಯವಾಗುತ್ತಿದೆ ಎಂದರಲ್ಲದೆ, ಶಾಸಕರು, ಸಂಸದರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಹಕಾರದೊಂದಿಗೆ ಕೈಜೋಡಿಸಿದಾಗ ಮಾತ್ರ, ಜನ ಕಲ್ಯಾಣ ಯೋಜನೆಯಾದ ಚೆಕ್ ಡ್ಯಾಂ ನಿರ್ಮಾಣದ ಉದ್ದೇಶ ಕಾರ್ಯಗತವಾಗಲು ಸಾಧ್ಯ ಎಂದರು.
ಈ ವೇಳೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ಟಿ.ಎಸ್.ಶಿವರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ರೈತರು, ಸ್ಥಳೀಯರು ಉಪಸ್ಥಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…