ದೊಡ್ಡಬಳ್ಳಾಪುರ: ದೇಶವನ್ನು ಕ್ಷಯರೋಗ ಮುಕ್ತವಾಗಿಸಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ಹಮ್ಮಿಕೊಂಡಿದೆ. ದೇಶವನ್ನು ಕ್ಷಯ ಮುಕ್ತವಾಗಿಸಲು ಸರ್ಕಾರದೊಂದಿಗೆ ಸಮುದಾಯ ಸಹ ಒಗ್ಗೂಡಿ ಜಾಗೃತಿ ಮೂಡಿಸಿ ಸಹಕರಿಸಬೇಕಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಜಂಟಿ ಕಾರ್ಯದರ್ಶಿ ಎಲ್.ಶ್ರೀನಿವಾಸಮೂರ್ತಿ ತಿಳಿಸಿದರು.
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಡ ಕ್ಷಯ ರೋಗಿಗಳ ದತ್ತು ಹಾಗೂ ಕಿಟ್‍ಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕ್ಷಯರೋಗ ವಾಸಿಯಾಗಬಹುದಾದ ಕಾಯಿಲೆಯಾಗಿದ್ದು, ಆರಂಭದಲ್ಲಿಯೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು. ಇಂತಹ ಹಲವಾರು ನಿದರ್ಶನಗಳು ನಮ್ಮ ಕಣ್ಣ ಮುಂದೆ ಇವೆ. ರ್ಥಿಕ ಸಂಕಷ್ಟದಲ್ಲಿರುವ ಕ್ಷಯ ರೋಗಿಗಳು ಸಮಾಜದ ಮುಖ್ಯವಾಹಿನಿಗೆ ಬರಲು ಸಮುದಾಯದ ನೆರವು ಸಹ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಕುಂತಲಾ ಎಂಬ ಬಡ ಕ್ಷಯರೋಗಿಗೆ ಚಿಕಿತ್ಸೆ ಮುಗಿಯುವವರೆಗೂ ಎಲ್.ಶ್ರೀನಿವಾಸಮೂರ್ತಿ ದತ್ತು ಪಡೆದು, ದವಸ-ಧಾನ್ಯಗಳು ಹಾಗೂ ಪೌಷ್ಟಿಕ ಆಹಾರವನ್ನು ವಿತರಿಸಿದರು.
ತಾಲೂಕಿನ ಮರಳೇನಹಳ್ಳಿಯ ಆರತಿ ಫಾರ್ಮಾಸಿಸ್ಟ್ ಸಂಸ್ಥೆಯಿಂದ ಕ್ಷಯರೋಗಿಗಳಿಗೆ ಒಂದು ತಿಂಗಳಿಗೆ ಆಗುವಷ್ಟು ಆಹಾರ ದಿನಸಿ ಪದಾರ್ಥಗಳನ್ನು ವಿತರಿಸಲಾಯಿತು.
ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಕಾರಿ ಡಾ.ರಮೇಶ್, ವೈದ್ಯರಾದ ಡಾ.ಚೆನ್ನಕೇಶವ, ಡಾ.ಮಂಜುನಾಥ್, ಕ್ಷಯರೋಗ ಸಂದರ್ಶಕ ಯುವರಾಜ್ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…