ಅ.16ರಂದು ಮರಳುಕುಂಟೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ / ತಹಶೀಲ್ದಾರ್ ಟಿ.ಎಸ್.ಶಿವರಾಜ್ ಮಧುರೆ ಹೋಬಳಿಯ ಉದ್ದೀಚಿಕ್ಕನಹಳ್ಳಿಯಲ್ಲಿ ಗ್ರಾಮ ವಾಸ್ತವ್ಯ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮ ಅಕ್ಟೋಬರ್ 16ರಂದು ನಡೆಯಲಿದ್ದು, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿಯ ಮರಳುಕುಂಟೆ ಗ್ರಾಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಅರ್ಹರಿಗೆ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ ಹಾಗೂ ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್  ಅಕ್ಟೋಬರ್ 16 ರಂದು ಬೆಳಿಗ್ಗೆ 11.00 ಗಂಟೆಗೆ ಮರಳುಕುಂಟೆ ಗ್ರಾಮಕ್ಕೆ ಆಗಮಿಸಿ, ಮರಳುಕುಂಟೆ ಗ್ರಾಮದ ಗ್ರಾಮದೇವತೆ ಮಾರಮ್ಮ ದೇವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, 11.30  ಗಂಟೆಗೆ ಹರಿಜನ ಕಾಲೋನಿಗೆ ಭೇಟಿ ನೀಡಿ, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಹಾಗೂ ಮಳೆಯಿಂದ ಬಿದ್ದ ಮನೆಯ ಮಾಲಿಕರಿಗೆ ಪರಿಹಾರ ವಿತರಣೆ ಮಾಡಲಿದ್ದಾರೆ.

ನಂತರ ಮಧ್ಯಾಹ್ನ 12.30 ಗಂಟೆಗೆ ಮರಳುಕುಂಟೆ ಗ್ರಾಮದ ವಿಶೇಷ ವಿಕಲಚೇತನರಿಗೆ ಆದೇಶದ ಪ್ರತಿ ವಿತರಣೆ, ಶ್ರವಣ ಸಾಧನ, ಊರುಗೋಲು ಹಾಗೂ ವಿವಿಧ ಸಲಕರಣೆಗಳನ್ನು ವಿತರಿಸಲಿದ್ದಾರೆ. ಮಧ್ಯಾಹ್ನ 1.30 ಗಂಟೆಗೆ ಮರಳುಕುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಲಿದ್ದಾರೆ.

ತದನಂತರ ಮಧ್ಯಾಹ್ನ 3.00 ಗಂಟೆಗೆ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಮರಳುಕುಂಟೆ ಗ್ರಾಮದ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ ಮಾಡುವ ಕಾರ್ಯಕ್ರಮ ನಡೆಯಲಿದೆ.

ಸಂಜೆ 5.00 ಗಂಟೆಗೆ ಗ್ರಾಮ ವೀಕ್ಷಣೆಗೆ ತೆರಳಲಿದ್ದು, ರಾತ್ರಿ 7.30 ಗಂಟೆಗೆ ಮರಳುಕುಂಟೆ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಹಾಗೂ ಅಕ್ಟೋಬರ್ 17ರ ಬೆಳಿಗ್ಗೆ 8.00 ಗಂಟೆಗೆ ಮರಳುಕುಂಟೆ ಗ್ರಾಮದ ಹರಿಜನ ಕಾಲೋನಿಗೆ ಭೇಟಿ ನೀಡಿ, ಉಪಹಾರ ಸೇವಿಸಿ, ನಂತರ ಕೇಂದ್ರಸ್ಥಾನಕ್ಕೆ ಪ್ರಯಾಣಿಸಲಿದ್ದಾರೆ.

ಅದರಂತೆಯೇ ಅಕ್ಟೋಬರ್ 16 ರಂದು ದೇವನಹಳ್ಳಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಅವರು ಕುಂದಾಣ ಹೋಬಳಿಯ ಜಾಲಿಗೆ ಗ್ರಾಮದಲ್ಲಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಮಧುರೆ ಹೋಬಳಿಯ ಉದ್ದೀಚಿಕ್ಕನಹಳ್ಳಿ ಗ್ರಾಮದಲ್ಲಿ ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ತಹಶೀಲ್ದಾರ್ ಗೀತಾ ಅವರು ಸೂಲಿಬೆಲೆ ಹೋಬಳಿಯ ಅತ್ತಿಬೆಲೆ ಗ್ರಾಮದಲ್ಲಿ ಆಯಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಸವಲತ್ತುಗಳನ್ನು ವಿತರಣೆ ಮಾಡಿ, ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ  ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ‌ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!