ದೊಡ್ಡಬಳ್ಳಾಪುರ: ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮದ ಅಂಗವಾಗಿ ಅಕ್ಟೋಬರ್ 16 ರಂದು ತಾಲೂಕಿನ ಉದ್ದೀಚಿಕ್ಕನಹಳ್ಳಿಯಲ್ಲಿ ನಡೆಯಬೇಕಿದ್ದ ತಹಶಿಲ್ದಾರ್ ಗ್ರಾಮ ವಾಸ್ತವ್ಯದ ಸ್ಥಳ ಬದಲಾವಣೆಯಾಗಿದೆ.
ಈ ಕುರಿತು ಹರಿತಲೇಖನಿ ಮಾಹಿತಿ ನೀಡಿರುವ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು, ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮದ ಅಂಗವಾಗಿ ಅ.16 ರಂದು ಮಧುರೆ ಹೋಬಳಿಯ ಉದ್ದೀಚಿಕ್ಕನಹಳ್ಳಿಯಲ್ಲಿ ನಡೆಸಲು ಉದ್ದೇಶಿಸಿದ್ದ ಗ್ರಾಮ ವಾಸ್ತವ್ಯವನ್ನು ಅದೇ ಹೋಬಳಿಯ ತಿಮ್ಮಸಂದ್ರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಗ್ರಾಮ ವಾಸ್ತವ್ಯದ ಅಂಗವಾಗಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ತಿಮ್ಮಸಂದ್ರ ಗ್ರಾಮಕ್ಕೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಶಿವರಾಜ್ ಅವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…