ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಂಕಲಾಳ ಗ್ರಾಮದ ನೀಲಗಿರಿ ತೋಪಿನ ಜೂಜು ಅಡ್ಡೆಯ ಮೇಲೆ ಸಬ್ ಇನ್ಸ್ಪೆಕ್ಟರ್ ಗಜೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿರುವ ಪೊಲೀಸರು ಹನ್ನೆರಡು ಮಂದಿಯನ್ನು ಬಂಧಿಸಿದ್ದಾರೆ.
ಡಿವೈಎಸ್ಪಿ ಟಿ.ರಂಗಪ್ಪ, ನಗರ ವೃತ್ತನಿರೀಕ್ಷ ಎಂ.ಬಿ.ನವೀನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬುಧವಾರ ಸಂಜೆ ಕಾರ್ಯಾಚರಣೆ ನಡೆಸಲಾಗಿದೆ.
ತಾಲೂಕಿನ ಚಿಕ್ಕಮಂಕಲಾಳ ಗ್ರಾಮದ ನೀಲಗಿರಿ ತೋಪಿನಲ್ಲಿ ಅಂದರ್ ಬಾಹರ್ ಜೂಜಾಡುತ್ತಿದ್ದ ಹನ್ನೆರಡು ಜನರನ್ನು ಬಂಧಿಸಿ, ರೂ1,16,100 ನಗದು, 3 ಕಾರು, 1 ದ್ವಿಚಕ್ರ ವಾಹನ ವಶಪಡಿಸಿಕೊಂಡು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..