ಬೆಂ.ಗ್ರಾ.ಜಿಲ್ಲೆ: ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ 4 ತಾಲ್ಲೂಕುಗಳ ಗಣ್ಯರಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ತಮ್ಮ ಸ್ವವಿವರಗಳೊಂದಿಗೆ ತಮ್ಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ವಿವರ ಹಾಗೂ ಕನಿಷ್ಠ 4 ಛಾಯಾಚಿತ್ರಗಳನ್ನು 2021ರ ಅಕ್ಟೋಬರ್ 25ರೊಳಗೆ ಉಪ ವಿಭಾಗಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳ ಕಾರ್ಯಾಲಯ, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿಗೆ ಸಲ್ಲಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….