ದೊಡ್ಡಬಳ್ಳಾಪುರ: ಆಯುುಧ ಪೂಜೆ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ನಿಯೊಂದಿಗೆ ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಿದ್ದಾರೆ.
ಮುಖ್ಯಮಂತ್ರಿಯಾದ ನಂತರ ಬೊಮ್ಮಾಯಿ ಅವರ ಮೊದಲ ಭೇಟಿ ಇದಾಗಿದ್ದು, ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಪುತ್ರ ಭರತ್ ಅವರ ಮಾಲೀಕತ್ವದ ಮ್ಯಾಗ್ನಟಿಕ್ ಇಂಜಿನಿಯರ್ಸ್ ಕಾರ್ಖಾನೆಯಲ್ಲಿ ನಡೆದ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಪತ್ನಿ ಚೆನ್ನಮ್ಮ ಅವರೊಂದಿಗೆ ಭಾಗಿಯಾದರು.
ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಉಪವಿಭಾಧಿಕಾರಿ ಅರುಳ್ ಕುಮಾರ್, ಡಿವೈಎಸ್ಪಿ ಟಿ.ರಂಗಪ್ಪ, ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಇನ್ಸ್‌ಪೆಕ್ಟರ್ ಸತೀಶ್ ಮತ್ತಿತರರು ಸ್ವಾಗತ ಕೋರಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..