ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಚಿಕಿತ್ಸೆಗೆ ದಾಖಲಾಗಿದ್ದ 08 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿ, ಹೊಸದಾಗಿ 07 ಕರೊನಾ ಪ್ರಕರಣಗಳು ವರದಿಯಾಗಿದ್ದು, ಹೊಸಕೋಟೆ ತಾಲೂಕಿನಲ್ಲಿಂದೂ ಶೂನ್ಯ ಸೋಂಕಿತರು ವರದಿಯಾಗಿದೆ.
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ವರದಿಯನ್ವಯ ನೆಲಮಂಗಲ ತಾಲೂಕಿನಲ್ಲಿ 03 ಪುರುಷರು. ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ತಲಾ ಓರ್ವ ಪುರುಷ, ಓರ್ವ ಮಹಿಳೆ ಸೇರಿ ಜಿಲ್ಲೆಯಲ್ಲಿ ಒಟ್ಟು 04 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ 25 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 65ಕ್ಕೆ ಇಳಿಕೆಯಾಗಿದೆ.
ಉಳಿದಂತೆ ಜಿಲ್ಲೆಯ 1871 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದ್ದು,
ಇಂದಿನ ವರದಿಯ ಅನ್ವಯ 324 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….