ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎನ್ನಲಾಗಿದೆ.
ಇಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿದ್ದು, ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶಗಳಲ್ಲೂ ಮಳೆಯಾಗಲಿದ್ದು, ಜವಾದ್ ಚಂಡಮಾರುತ ಭೀತಿ ಎದುರಾಗಿದೆ ಎಂದು ಕೋ.ಮಿ ವರದಿ ಮಾಡಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……