ನಾಳೆ ಉದ್ದೀಚಿಕ್ಕನಹಳ್ಳಿಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್ ಟಿ.ಎಸ್.ಶಿವರಾಜ್ ಗ್ರಾಮ ವಾಸ್ತವ್ಯ ಫಿಕ್ಸ್

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮ ಅಕ್ಟೋಬರ್ 16ರಂದು ನಡೆಯಲಿದ್ದು, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿಯ ಮರಳುಕುಂಟೆ ಗ್ರಾಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಅರ್ಹರಿಗೆ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ ಹಾಗೂ ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್  ಅಕ್ಟೋಬರ್ 16 ರಂದು ಬೆಳಿಗ್ಗೆ 11.00 ಗಂಟೆಗೆ ಮರಳುಕುಂಟೆ ಗ್ರಾಮಕ್ಕೆ ಆಗಮಿಸಿ, ಮರಳುಕುಂಟೆ ಗ್ರಾಮದ ಗ್ರಾಮದೇವತೆ ಮಾರಮ್ಮ ದೇವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, 11.30  ಗಂಟೆಗೆ ಹರಿಜನ ಕಾಲೋನಿಗೆ ಭೇಟಿ ನೀಡಿ, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಹಾಗೂ ಮಳೆಯಿಂದ ಬಿದ್ದ ಮನೆಯ ಮಾಲಿಕರಿಗೆ ಪರಿಹಾರ ವಿತರಣೆ ಮಾಡಲಿದ್ದಾರೆ.

ನಂತರ ಮಧ್ಯಾಹ್ನ 12.30 ಗಂಟೆಗೆ ಮರಳುಕುಂಟೆ ಗ್ರಾಮದ ವಿಶೇಷ ವಿಕಲಚೇತನರಿಗೆ ಆದೇಶದ ಪ್ರತಿ ವಿತರಣೆ, ಶ್ರವಣ ಸಾಧನ, ಊರುಗೋಲು ಹಾಗೂ ವಿವಿಧ ಸಲಕರಣೆಗಳನ್ನು ವಿತರಿಸಲಿದ್ದಾರೆ. ಮಧ್ಯಾಹ್ನ 1.30 ಗಂಟೆಗೆ ಮರಳುಕುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಲಿದ್ದಾರೆ.

ತದನಂತರ ಮಧ್ಯಾಹ್ನ 3.00 ಗಂಟೆಗೆ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಮರಳುಕುಂಟೆ ಗ್ರಾಮದ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ ಮಾಡುವ ಕಾರ್ಯಕ್ರಮ ನಡೆಯಲಿದೆ.

ಸಂಜೆ 5.00 ಗಂಟೆಗೆ ಗ್ರಾಮ ವೀಕ್ಷಣೆಗೆ ತೆರಳಲಿದ್ದು, ರಾತ್ರಿ 7.30 ಗಂಟೆಗೆ ಮರಳುಕುಂಟೆ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಹಾಗೂ ಅಕ್ಟೋಬರ್ 17ರ ಬೆಳಿಗ್ಗೆ 8.00 ಗಂಟೆಗೆ ಮರಳುಕುಂಟೆ ಗ್ರಾಮದ ಹರಿಜನ ಕಾಲೋನಿಗೆ ಭೇಟಿ ನೀಡಿ, ಉಪಹಾರ ಸೇವಿಸಿ, ನಂತರ ಕೇಂದ್ರಸ್ಥಾನಕ್ಕೆ ಪ್ರಯಾಣಿಸಲಿದ್ದಾರೆ.

ಅದರಂತೆಯೇ ಅಕ್ಟೋಬರ್ 16 ರಂದು ದೇವನಹಳ್ಳಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಅವರು ಕುಂದಾಣ ಹೋಬಳಿಯ ಜಾಲಿಗೆ ಗ್ರಾಮದಲ್ಲಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಮಧುರೆ ಹೋಬಳಿಯ ಉದ್ದೀಚಿಕ್ಕನಹಳ್ಳಿ ಗ್ರಾಮದಲ್ಲಿ ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ತಹಶೀಲ್ದಾರ್ ಗೀತಾ ಅವರು ಸೂಲಿಬೆಲೆ ಹೋಬಳಿಯ ಅತ್ತಿಬೆಲೆ ಗ್ರಾಮದಲ್ಲಿ ಆಯಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಸವಲತ್ತುಗಳನ್ನು ವಿತರಣೆ ಮಾಡಿ, ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ  ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ‌ ತಿಳಿಸಿದೆ.

ತಿಮ್ಮಸಂದ್ರ ಗ್ರಾಮವಾಸ್ತವ್ಯ ಮುಂದೂಡಿಕೆ: ದೊಡ್ಡಬಳ್ಳಾಪುರ ತಾಲೂಕಿನ ತಹಶೀಲ್ದಾರರ ಗ್ರಾಮವಾಸ್ತವ್ಯದ ಗೊಂದಲ ಬಗೆ ಹರಿದಿದ್ದು, ಅಂತಿಮವಾಗಿ ಉದ್ದೀಚಿಕ್ಕನಹಳ್ಳಿಯಲ್ಲಿ ಗ್ರಾಮವಾಸ್ತವ್ಯ ನಡೆಸಲು ತಾಲೂಕು ಆಡಳಿತ ತೀರ್ಮಾನಿಸಿದೆ.

ಉದ್ದೀಚಿಕ್ಕನಹಳ್ಳಿ ಬದಲಾಗಿ ತಿಮ್ಮಸಂದ್ರದಲ್ಲಿ ನಡೆಯಬೇಕಿದ್ದ ಗ್ರಾಮವಾಸ್ತವ್ಯ ಕೆಲ ಆಡಳಿತಾತ್ಮಕ ಅನುಮೋದನೆ ದೊರಕದ ಹಿನ್ನೆಲೆಯಲ್ಲಿ ಉದ್ದೀಚಿಕ್ಕನಹಳ್ಳಿಯಲ್ಲಿಯೆ ನಡೆಯಲಿದೆ. ಮುಂದಿನ ಹಂತಗಳಲ್ಲಿ ಗ್ರಾಮ ವಾಸ್ತವ್ಯವನ್ನು ತಿಮ್ಮಸಂದ್ರದಲ್ಲಿ ನಡೆಸಲಾಗುವುದು ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!