ಇಂದು (ಅ.16)ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು(ಎಂ.ಟಿ.ಬಿ.) ಜಿಲ್ಲಾ ಪ್ರವಾಸ

ಬೆಂ.ಗ್ರಾ.ಜಿಲ್ಲೆ: ಪೌರಾಡಳಿತ ಮತ್ತು ‌ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವಎನ್.ನಾಗರಾಜು(ಎಂ.ಟಿ.ಬಿ.) ಅಕ್ಟೋಬರ್ 16 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. 

ಸಚಿವರು ಬೆಳಿಗ್ಗೆ 11 ಗಂಟೆಗೆ ನೆಲಮಂಗಲ ತಾಲ್ಲೂಕಿನ ಸೋಂಪುರ ಹೋಬಳಿ ಮರಳುಕುಂಟೆ ‌ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ “ಜಿಲ್ಲಾಧಿಕಾರಿಗಳ ನಡೆ, ಹಳ್ಳಿ ಕಡೆ” ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ ‌11.30 ಗಂಟೆಗೆ ಮರಳುಕುಂಟೆ ಗ್ರಾಮದ ಹರಿಜನ ಕಾಲೋನಿಗೆ ಭೇಟಿ ನೀಡಿ, ಅಹವಾಲು ಸ್ವೀಕರಿಸಲಿದ್ದಾರೆ ಹಾಗೂ ಮಳೆಯಿಂದ ಬಿದ್ದ ಮನೆಯ ಮಾಲೀಕರಿಗೆ ಪರಿಹಾರ ವಿತರಣೆ ಮಾಡಲಿದ್ದಾರೆ.

ಮಧ್ಯಾಹ್ನ 12.30 ಗಂಟೆಗೆ ಜಿಲ್ಲಾಡಳಿತದ ವತಿಯಿಂದ ಅಯೋಜಿಸಿರುವ ವಾಲಿಬಾಲ್ ಟೂರ್ನಮೆಂಟ್ ಗೆ ಚಾಲನೆ ನೀಡಲಿದ್ದಾರೆ ಹಾಗೂ 12.45 ಗಂಟೆಗೆ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 1.00 ಗಂಟೆಗೆ ಮರಳುಕುಂಟೆ ಗ್ರಾಮದ ವಿಶೇಷ ವಿಕಲಚೇತನರಿಗೆ ವಿವಿಧ ಸೌಲಭ್ಯಗಳ ಆದೇಶ ಪ್ರತಿ ವಿತರಣೆ ಹಾಗೂ ವಿವಿಧ ಸಲಕರಣೆಗಳನ್ನು ವಿತರಿಸಲಿದ್ದಾರೆ.

ನಂತರ ಮಧ್ಯಾಹ್ನ 3.00 ಗಂಟೆಗೆ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ತದನಂತರ 3.30 ಗಂಟೆಗೆ ಮರಳುಕುಂಟೆ-ನೆಲಮಂಗಲ ರಸ್ತೆ ಮಾರ್ಗವಾಗಿ ಬೆಂಗಳೂರಿನ ಕೇಂದ್ರಸ್ಥಾನಕ್ಕೆ ನಿರ್ಗಮಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!