ಉದ್ದೀಚಿಕ್ಕನಹಳ್ಳಿಯಲ್ಲಿ ತಹಶೀಲ್ದಾರ್ ಗ್ರಾಮವಾಸ್ತವ್ಯ: ಗ್ರಾಮ ಮಟ್ಟದಲ್ಲಿಯೇ ಸಮಸ್ಯೆ ಬಗೆ ಹರಿಸಲು ಕಾರ್ಯಕ್ರಮ ಸಹಕಾರಿ – ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಜಿಲ್ಲಾಧಿಕಾರಿಗಳ ನಡರ ಹಳ್ಳಿಗಳ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿರುವ ತಹಶೀಲ್ದಾರ್ ಗ್ರಾಮ ವಾಸ್ತವ್ಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಹಕಾರಿ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

ತಾಲೂಕಿನ ಮಧುರೆ ಹೋಬಳಿ ಉದ್ದೀಚಿಕ್ಕನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮದ ಅಂಗವಾಗಿ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳೊಂದಿಗೆ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಪಡಿತರ ಚೀಟಿ, ಖಾತೆ ಬದಲಾವಣೆ, ಪಹಣಿ ತಿದ್ದುಪಡಿ, ಪೋಡಿ, ಉಳುಮೆ ಚೀಟಿ, ಹಕ್ಕುಪತ್ರಗಳ ವಿತರಣೆ ಮಾಡುವ ಸಲುವಾಗಿ ಆಯೋಜಿಸಲಾಗಿರುವ ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಾರ್ವಜನಿಕರಿಗೆ ಸಹಕಾರಿಯಾಗಿದ್ದು, ಮನವಿ ಪತ್ರದ ಮೂಲಕ ಅಹವಾಲು ಸಲ್ಲಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕೆಂದರು.

ತಹಶೀಲ್ದಾರ್ ಟಿ.ಎಸ್.ಶಿವರಾಜ್ ಮಾತನಾಡಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಲಾಗುತ್ತಿದ್ದು, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಕೆಲ ತಿಂಗಳ ಹಿಂದೆ ಹೊಸಹಳ್ಳಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ 688 ವಿವಿಧ ಸಾಮಾಜಿಕ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಹಾಗೂ ಕಂದಾಯ ಸಮಸ್ಯೆ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿತ್ತು ಎಂದರು.

ಇಂದು ನಡೆದ ಕಾರ್ಯಕ್ರಮದಲ್ಲಿ ಕೋಡಿಪಾಳ್ಯ, ಉದ್ದೀಚಿಕ್ಕನಹಳ್ಳಿ ಹಾಗೂ ಇಸ್ತೂರು ಗ್ರಾಮಕ್ಕೆ ಸ್ಮಶಾನಕ್ಕೆ ಜಮೀನು, ಆಶ್ರಯ ಯೋಜನೆಗೆ ಗೋಮಾಳ ನೀಡಲು ಮನವಿ, ಕನಸವಾಡಿ ಗ್ರಾಮದಲ್ಲಿ ಶೌಚಾಲಯ ನಿರ್ಮಾಣಕ್ಕೆ ಮನವಿ, ಸ್ಮಶಾನ ಒತ್ತುವರಿ ತೆರವಿಗೆ ಮನವಿ ಹಾಗೂ ಶಾಲೆಯ ಹಿಂಬದಿಯಲ್ಲಿನ ಮರಗಳ ಬೆಲೆ ನಿಗದಿ ಮಾಡಿ, ಕಡಿಯಲು ಅರಣ್ಯ ಇಲಾಖೆ ಅನುಮತೊ ನೀಡುವಂತೆ ಮನವಿ ಸಲ್ಲಿಸಲಾಯಿತು.

ಉಳಿದಂತೆ ಕಂದಾಯ ಇಲಾಖೆ 31, ಪಂಚಾಯತ್ ರಾಜ್ ಇಲಾಖೆಯ 30, ಲೋಕೋಪಯೋಗಿ ಇಲಾಖೆಯ 07, ಅರಣ್ಯ ಇಲಾಖೆಯ 01, ಸರ್ವೆ ಇಲಾಖೆಯ 13, ಆಹಾರ ಇಲಾಖೆಯ 01ಸೇರಿ ಒಟ್ಟು 78 ಅರ್ಜಿಗಳನ್ನು ಗ್ರಾಮಸ್ಥರು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ತಾಪಂ ಇಒ ಮುರುಡಯ್ಯ, ತಾಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ, ಸಿಡಿಪಿಒ ಎಸ್.ಅನಿತಾಲಕ್ಷ್ಮೀ, ಸಬ್ ಇನ್ಸ್‌ಪೆಕ್ಟರ್ ವಿ.ಗಜೇಂದ್ರ, ಜಿಪಂ ಮಾಜಿ ಸದಸ್ಯ ಚುಂಚೇಗೌಡ ಸೇರಿದಂತೆ ಸ್ಥಳೀಯ ಜನಪ್ರತಿನಿದಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!