ತನು-ಮನ ಸೆಳೆದ ವೈಭವಯುತ ಜಂಬೂಸವಾರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಕಾರ್ಯಕ್ರಮ ಶುಕ್ರವಾರ ಅರಮನೆ ಆವರಣದಲ್ಲಿ ಸಂಪ್ರದಾಯಕವಾಗಿ ಜರುಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅರಮನೆಯ ಬಲರಾಮ ದ್ವಾರದ ಬಳಿ ಸಂಜೆ 4.36 ರಿಂದ 4.46 ರೊಳಗೆ ಸಲ್ಲುವ ಮೀನ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆಸಲ್ಲಿಸಿದರು. ಬಳಿಕ ದಸರಾ ಮಹೋತ್ಸವದ ಕೇಂದ್ರಬಿಂದು ಜಂಬೂಸವಾರಿಯಲ್ಲಿ 750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿ ಶ್ರೀ ಚಾಮುಂಡೇಶ್ವರಿಯ ವಿಗ್ರಹವನ್ನು ಎರಡನೇ ಬಾರಿಗೆ ಹೊತ್ತ ಅಭಿಮನ್ಯು, ತನ್ನ ಸಂಗಾತಿಗಳಾದ ಕಾವೇರಿ ಹಾಗೂ ಚೈತ್ರ ಜೊತೆಗೆ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತ ಸಂಜೆ 5.23ಕ್ಕೆ ವಿಶೇಷ ವೇದಿಕೆಗೆ ಬಂದಿತು.

ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿನ್ನದ ಅಂಬಾರಿಯಲ್ಲಿ ಅಲಂಕೃತಗೊಂಡ ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸುತ್ತಿದ್ದಂತೆ ರಾಷ್ಟ್ರಗೀತೆ ಮೊಳಗಿತು. ಇದೇ ವೇಳೆಗೆ 52 ಸೆಕೆಂಡ್‌ಗಳಲ್ಲಿ 21 ಬಾರಿ ಕುಶಾಲತೋಪುಗಳನ್ನು ಅರಮನೆಯ ಹೊರಾವರಣದಲ್ಲಿ ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಸಿಡಿಸಿದರು.

ಬಳಿಕ ಅಂಬಾರಿ ಆನೆಯು ಪೊಲೀಸ್ ಅಶ್ವದಳ, ಕೆ‌ಎಸ್‌ಆರ್‌ಪಿ ಮೌಂಟೇನ್ ಕಂಪನಿ ಬೆಂಗಾವಲಿನಲ್ಲಿ ಸಾಗಿತು. ನೆರೆದಿದ್ದ ಜನರು ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಂಡು ಝೇಂಕಾರ ಘೋಷಗಳನ್ನು ಕೂಗಿದರು. 

ಮೆರವಣಿಗೆಯ ಆರಂಭದಲ್ಲಿ ನಿಶಾನೆ ಆನೆ ಧನಂಜಯ ಹಾಗೂ ಗೋಪಾಲಸ್ವಾಮಿ ನಡುವೆ ಅಶ್ವತ್ಥಾಮ ಆನೆಗಳು ಗಾಂಭೀರ್ಯದಿಂದ ಹೆಜ್ಜೆ ಹಾಕಿದವು. ಬಳಿಕ ನಾದಸ್ವರ ಮತ್ತು ಸ್ಯಾಕ್ಸೋಫೋನ್ ಕಲಾವಿದರು ಪ್ರದರ್ಶನ ನೀಡುತ್ತಾ ಸಾಗಿದರು. ನಾದಸ್ವರ, ವೀರಗಾಸೆ, ಚೆಂಡೆ ಮೇಳ, ಮರ ಗಾಲು ವೇಷ, ಚಿಲಿಪಿಲಿ ಗೊಂಬೆ ಕಲಾವಿದರು ಪ್ರದರ್ಶನ ನೀಡುತ್ತಾ ಎಲ್ಲರನ್ನು ರಂಜಿಸಿದರು.

ಗಮನಸೆಳೆದ ಕಲಾ ತಂಡಗಳು: ನಾದಸ್ವರ ವಿದ್ವಾನ್ ಆರ್. ನಾಗರಾಜ್ ಮತ್ತು ತಂಡ ಹಾಗೂ ಹಂಪಾಪುರ ಮಹದೇವ್ ತಂಡದಿಂದ ಸುಮಧುರವಾಗಿ ನಾದಸ್ವರ ನುಡಿಸುತ್ತಾ ಸಾಗಿದರು‌. ಮೈಸೂರಿನ ರತ್ನಮ್ಮ ತಂಡ, ಅಂಬಳೆ ಶಿವಣ್ಣ ತಂಡ, ನೀಲಕಂಠ ತಂಡ, ಆನಂದ್ ಕುಮಾರ್ ತಂಡ ಹೆಚ್.ಪಿ ರುದ್ರೇಶ್ ಹಾಗೂ ವೀರಭದ್ರೇಶ್ವರ ವೀರಗಾಸೆ ತಂಡದವರು ವೀರಗಾಸೆ ಕುಣಿತವಾಡುತ್ತ ಮುನ್ನೆಡೆದರು‌.

ಕೆಂಪಿಸಿದ್ದನಹುಂಡಿ ಮಹದೇವು, ಚಿಕ್ಕಮರಿಯಪ್ಪ,  ಕಂಸಾಳೆ ಸಿದ್ದರಾಮು ಹಾಗೂ ಕೃಷ್ಣ ಜನಮನ ಮತ್ತು ತಂಡದಿಂದ ಕಂಸಾಳೆ ಜಾನಪದ ನೃತ್ಯ ಮಾಡಿದರು. ರಮ್ಯ , ಕಿರಣ್, ಕುಮಾರ್, ಸ್ವಾಮಿನಾಯಕ ಮತ್ತು ತಂಡದವರು ಮಾಡಿದ ಡೊಳ್ಳುಕುಣಿತವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. 

ಅಮೃತ ಮತ್ತು ತಂಡ, ಪಲ್ಲವಿ ಮತ್ತು ತಂಡದಿಂದ ನಗಾರಿ, ಪಲ್ಲವಿ ಹಾಗೂ ವೈ.ಬಿ ಪ್ರಕಾಶ್ ಮತ್ತು ತಂಡದಿಂದ ಪೂಜಾಕುಣಿತ ಅದ್ಭುತವಾಗಿತ್ತು. ಅಶ್ವಾರೋಹಿ ಪಡೆಯ ಪ್ರಧಾನ ಕಮಾಂಡೆಂಟ್ ಕೆಎಆರ್‌ಪಿ ಮೌಂಟೆಂಡ್ ಕಂಪನಿ ತುಕಡಿಗಳು ಶಿಸ್ತುಬದ್ಧವಾಗಿ ಹೆಜ್ಜೆ ಹಾಕಿದವು.

ಚಿತ್ತಾಕರ್ಷಕ ಸ್ತಬ್ದಚಿತ್ರಗಳು: ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಒಟ್ಟು 6 ವರ್ಣರಂಜಿತ ಸ್ತಬ್ಧಚಿತ್ರಗಳು ಎಲ್ಲರನ್ನೂ ಆಕರ್ಷಿಸಿದವು. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಸ್ತಬ್ದಚಿತ್ರವು ಮೊದಲಿಗೆ ಸಾಗುವ ಮೂಲಕ ಎಲ್ಲರ ಚಿತ್ತ ನೆಟ್ಟಿತು.

ಬಳಿಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ‘ಬಹುವಸತಿ ಸಂಕೀರ್ಣ’, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ‘ಕೊರೊನಾ ಮುಕ್ತ ಕರ್ನಾಟಕ’ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ‘ಸಮಗ್ರ ಕೃಷಿ’, ಮತ್ತು ದಸರಾ ಉಪಸಮಿತಿಯಿಂದ ‘ಪರಿಸರ ಸಂರಕ್ಷಣೆ’, ‘ಅರಮನೆ ಆನೆಬಂಡಿ’ ಸ್ತಬ್ಧ ಚಿತ್ರಗಳು ಸಾಗಿದವು. 

ಪುಷ್ಪಾರ್ಚನೆ ವೇಳೆ ರಾಜ್ಯ ಹೃಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಮೇಯರ್ ಸುನಂದ ಪಾಲನೇತ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೋಲಿಸ್ ಆಯುಕ್ತ ಡಾ.ಚಂದ್ರಗುಪ್ತ, ಮೈಸೂರು ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!