ದೊಡ್ಡಬಳ್ಳಾಪುರ: ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಯುವಕ ಶವವಾಗಿ ನೀರಿನ ಕುಂಟೆಯಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಸೂಲುಕುಂಟೆ ಗ್ರಾಮದ ಆನಂದ್ (24 ವರ್ಷ) ಎನ್ನಲಾಗಿದ್ದು, ಕಳೆದ ಮೂರು ದಿನಗಳಿಂದ ಸೂಲುಕುಂಟೆ ಗ್ರಾಮದಿಂದ ಕಾಣೆಯಾಗಿದ್ದ ಎನ್ನಲಾಗಿದೆ.
ಇಂದು ಚನ್ನವೀರನಹಳ್ಳಿ ಹಾಗೂ ಸೂಲುಕುಂಟೆ ನಡುವೆ ಇರುವ ಗಂಗಪ್ಪನಕುಂಟೆಯಲ್ಲಿ ಮೃತ ಯುವಕನ ಶವ ತೇಲಿ ಬಂದಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಕುಂಟೆಯಿಂದ ಹೊರ ತೆಗೆದಿದ್ದು, ಕಾಣೆಯಾಗಿದ್ದ ಆನಂದ್ ಶವ ಎಂದು ಗುರುತಿಸಿದ್ದಾರೆ.
ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……