ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಕಲಾವಿದ ಶಂಕರ್ ರಾವ್ (84 ವರ್ಷ) ಇಂದು ಬೆಳಗ್ಗೆ ಅರಕೆರೆಯ ನಿವಾಸದಲ್ಲಿ ವಿಧಿವಶರಾಗಿದ್ದಾರೆ.
ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಇವರು, ಪ್ರಸಿದ್ಧ ಧಾರಾವಾಹಿ “ಪಾಪ ಪಾಂಡು” ಇದರಲ್ಲಿ ಮೆನೆಮಾತಾಗಿದ್ದರು.
ಹವ್ಯಾಸಿ ರಂಗಭೂಮಿ ಕಲಾವಿದರಾಗಿದ್ದ ಮೃತರು ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.
ಹಿರಿಯ ನಟನ ನಿಧನಕ್ಕೆ ಚಂದನವನದ ನಟರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಬನಶಂಕರಿ ಚಿತಾಗಾರದಲ್ಲಿ ಶಂಕರ್ ರಾವ್ ಅಂತ್ಯಕ್ರೀಯೆ ನೆರವೆರಲಿದೆ ಎಂದು ಕುಟುಂಬದ ಮೂಲಗಳು ತಿಳಿದಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……