ಈದ್‌ಮಿಲಾದ್, ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಮೂರನೇ ಅಲೆಯ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ 2021ರ ಅಕ್ಟೋಬರ್ 07ರ ಮಾರ್ಗಸೂಚಿಯಂತೆ 2021ನೇ ಸಾಲಿನ ಅಕ್ಟೋಬರ್ ಮಾಹೆಯಲ್ಲಿ ನಡೆಯಲಿರುವ ಈದ್‌ಮಿಲಾದ್(ಮಿಲಾದುನ್ನಬಿ) ಮತ್ತು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹೊರಡಿಸಲಾಗಿರುವ ಮಾರ್ಗಸೂಚಿಗಳನ್ನು ಜಿಲ್ಲೆಯ ಸಾರ್ವಜನಿಕರು ಪಾಲಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

ಈದ್‌ಮಿಲಾದ್ (ಮಿಲಾದುನ್ನಬಿ) ಹಬ್ಬವನ್ನು ಆಚರಿಸುವ ಸಂಬಂಧದ ಮಾರ್ಗಸೂಚಿಗಳು: ಕೋವಿಡ್-19 ವೈರಾಣು ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಸಕ್ತ ವರ್ಷದ ಈದ್ ಮಿಲಾದ್ ಹಬ್ಬವನ್ನು ಅತ್ಯಂತ ಸರಳವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸುವುದು. 

ರಾಜ್ಯಾದ್ಯಂತ 2021ರ ಅಕ್ಟೋಬರ್ 19ರಂದು ಆಚರಿಸಲಿರುವ ಈದ್ ಮಿಲಾದ್ ಹಬ್ಬದ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ಸಾಂಸ್ಕೃತಿಕ ಕಾರ್ಯಕ್ರಮ/ಸಭೆ ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸುವುದು. 

ಮಸೀದಿಗಳಲ್ಲಿ ಮತ್ತು ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್-19ರ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ಈದ್ ಮಿಲಾದ್ ಆಚರಣೆ ನೆರವೇರಿಸುವುದು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು/ಡಿಜಿಟಲ್ ಸೌಂಡ್ ಸಿಸ್ಟಮ್(ಡಿಜೆ) ಬಳಕೆಯನ್ನು ನಿಷೇಧಿಸಲಾಗಿದೆ. 

ಪ್ರಾರ್ಥನಾ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸುವುದು ಮತ್ತು ಮುಖಗವಸನ್ನು ಧರಿಸದೆ ಸೇರತಕ್ಕಂತಹ ಸಾರ್ವಜನಿಕರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು, 60 ವರ್ಷಕ್ಕಿಂತ ಮೇಲ್ಪಟ್ಟ ನಾಗರೀಕರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಿಕೊಂಡು ಹಬ್ಬವನ್ನು ಆಚರಿಸುವುದು.

ಸ್ಯಾನಿಟೈಸೇಷನ್ ಹಾಗೂ ಹ್ಯಾಂಡ್ ವಾಷ್‌ನೊಂದಿಗೆ ಕೈ ತೊಳೆಯಲು ಪ್ರವೇಶ ದ್ವಾರದಲ್ಲಿ ಸೂಕ್ತ ವ್ಯವಸ್ಥೆ ಮಾಡುವುದು. ಕೋವಿಡ್-19 ಸಮುಚಿತ ವರ್ತನೆಗಳೊಂದಿಗೆ ಸಾಮೂಹಿಕ ಪ್ರಾರ್ಥನೆಯನ್ನು ನಡೆಸುವುದು. ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ, ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸುವುದು.

ಕೋವಿಡ್-19 ಸಮುಚಿತ ವರ್ತನೆಯಂತೆ ಮಸೀದಿಗಳಲ್ಲಿ ನಮಾಜ್ ನಿರ್ವಹಿಸುವವರ ಮಧ್ಯ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಆಗಾಗ ಕೈಗಳನ್ನು ಸೋಪು ಮತ್ತು ಸ್ಯಾನಿಟೈಸರ್‌ಗಳಿಂದ ಶುಚಿಗೊಳಿಸಿಕೊಳ್ಳಬೇಕು. ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆಯನ್ನು ಮಾಡುವುದು. 

ಮಸೀದಿಗಳಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ಮನೆಗಳಿಂದ ಮುಸಲ್ಲಾವನ್ನು(ಜಾಯನಮಾಜ್) ಕಡ್ಡಾಯವಾಗಿ ತರಬೇಕು. ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡಬಾರದು. ಮಸೀದಿಗಳನ್ನು ಹೊರತುಪಡಿಸಿ, ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಅಂದರೆ, ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯನ್ನು ಆಯೋಜಿಸುವಂತಿಲ್ಲ.ಖಬರಸ್ಥಾನದಲ್ಲಿ ಈದ್ ಮಿಲಾದ್ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ/ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಮತ್ತು ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ.

ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ಸಂಬಂಧದ ಮಾರ್ಗಸೂಚಿಗಳು: ಕೋವಿಡ್-19 ವೈರಾಣು ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಸಕ್ತ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಸರಳವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸುವುದು.

ರಾಜ್ಯಾದ್ಯಂತ 2021ರ ಅಕ್ಟೋಬರ್ 20 ರಂದು ಆಚರಿಸಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸಿದೆ.

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬಂಧದ ಪ್ರವಚನ ಕಾರ್ಯಕ್ರಮ/ ಸಾಂಸ್ಕೃತಿಕ ಕಾರ್ಯಕ್ರಮ/ ಸಭೆ, ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಮ್ಮೆಲೇ ಸೇರುವಂತಿಲ್ಲ ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸುವುದು.

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಸ್ಥಳಗಳಲ್ಲಿ ಸ್ಯಾನಿಟೈಸೇಷನ್ ಹಾಗೂ ಹ್ಯಾಂಡ್‌ವಾಷ್‌ನೊಂದಿಗೆ ಕೈ ತೊಳೆಯಲು ಸೂಕ್ತ ವ್ಯವಸ್ಥೆ ಮಾಡುವುದು.

ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು/ಡಿಜಿಟಲ್ ಸೌಂಡ್ ಸಿಸ್ಟಮ್(ಡಿಜೆ) ಬಳಕೆಯನ್ನು ನಿಷೇಧಿಸಲಾಗಿದೆ. ಆಚರಣೆಯ ಸಂದರ್ಭದಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸುವುದು ಮತ್ತು ಮುಖಗವಸನ್ನು ಧರಿಸದೆ ಸೇರುವಂತಹ ಸಾರ್ವಜನಿಕರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವುದು. 60 ವರ್ಷಕ್ಕಿಂತ ಮೇಲ್ಪಟ್ಟ ನಾಗರೀಕರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾರ್ವಜನಿಕವಾಗಿ ನಡೆಯುವ ಆಚರಣೆ, ಕಾರ್ಯಕ್ರಮಗಳಲ್ಲಿ ಜನರ ಒಗ್ಗೂಡುವಿಕೆಯಲ್ಲಿ ಭಾಗವಹಿಸುವಂತಿಲ್ಲ.

ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಈದ್ ಮಿಲಾದ್ ಹಬ್ಬ ಹಾಗೂ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸುವುದು.

ಈ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005ರ ಸೆಕ್ಷನ್ 51 ರಿಂದ 60ರನ್ವಯ ಮತ್ತು ಭಾರತ ದಂಡ ಸಂಹಿತೆಯ 188ನೇ ಪ್ರಕರಣದಡಿ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…

ರಾಜಕೀಯ

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ, ನಮಗೆ ಸಿಕ್ಕ

“ಮೇಕೆದಾಟು (Mekedatu) ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="116123"]
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ

ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ

[ccc_my_favorite_select_button post_id="116006"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!