ಮಂಗಳೂರು: ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್.ರಾಜೇಶ್ ಅವರು ಕಾನೂನು ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರಿನನ್ವಯ ವಿದ್ಯಾರ್ಥಿನಿ ಕಳೆದ ಆ.8 ರಂದು ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದರು. ಆಗ ರಾಜೇಶ್ ಯುವತಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಒತ್ತಾಯಿಸುತ್ತಿದ್ದರು. ಸೆ.25 ರಂದು ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ರಾಜೇಶ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಸರಕಾರಿ ಅಭಿಯೋಜಕರಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.
ಎರಡು ದಿನಗಳ ಹಿಂದೆ ರಾಜೇಶ್ ಮತ್ತು ವಿದ್ಯಾರ್ಥಿನಿ ಮಾತನಾಡಿದ್ದು ಎನ್ನಲಾದ ಫೋನ್ ಕರೆಯ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನು ಆರೋಪಗಳನ್ನು ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್.ರಾಜೇಶ್ ನಿರಾಕರಿಸಿದ್ದಾರೆಂದು ಕೋಸ್ಟಲ್ ಮಿರರ್ ವರದಿ ಮಾಡಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……