ಗೋವಾ: ಬಾಲಿವುಡ್ ನಟಿ ಪೂಜಾ ಬೇಡಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
ವರದಿಯಲ್ಲಿ ನನ್ನ ಪತಿ, ಮನೆಯ ಸಹಾಯಕ ಹಾಗೂ ನನಗೆ ಕೋವಿಡ್ ಸೋಂಕು ದೃಢವಾಗಿದೆ ಎಂದಿರುವ ಅವರು, ತೀವ್ರವಾದ ಕೆಮ್ಮಿನಿಂದ ಬಳಸಿದ್ದಾರೆ.
ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ನಾನು ಕೋವಿಡ್ ಲಸಿಕೆ ಪಡೆದಿಲ್ಲ. ಈಗ ಇನ್ನಷ್ಟು ಬಲಿಷ್ಠರಾಗುವ ಪ್ರಯತ್ನ ಮಾಡುತ್ತಿದ್ದೇವೆ. ಕೆಲವು ದಿನಗಳಲ್ಲೇ ಚೇತರಿಸಿಕೊಳ್ಳುತ್ತೇವೆ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……