ದೊಡ್ಡಬಳ್ಳಾಪುರ: ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಶಾಸಕ ಟಿ.ವೆಂಕಟರಮಣಯ್ಯ ಮಹರ್ಷಿ ವಾಲ್ಮೀಕಿ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ವೇಳೆ ನಗರ ಅಧ್ಯಕ್ಷ ಕೆ.ಪಿ.ಜಗನ್ನಾಥ್ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ಕಸಬಾ ಹೋಬಳಿ ಅಧ್ಯಕ್ಷ ಅಪ್ಪಿವೆಂಕಟೇಶ್, ಮುಖಂಡರಾದ ಆಂಜನಮೂರ್ತಿ, ನಾಗರತ್ನಮ್ಮ, ರೇವತಿ ಅನಂತರಾಮ್, ಶ್ರೀನಗರ ಬಷೀರ್, ಮುನಿರಾಜು, ಭೀಮಣ್ಣ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……