ಮಹಾನ್ ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶಗಳು ಸರ್ವ ಕಾಲಕ್ಕೂ ಪ್ರಸ್ತುತ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಮಹಾನ್ ಮಹರ್ಷಿ ವಾಲ್ಮೀಕಿ ವಿರಚಿತ ರಾಮಾಯಣ ಅತ್ಯಂತ ಶ್ರೇಷ್ಠ ಮಹಾಕಾವ್ಯವಾಗಿದ್ದು, ಮನುಷ್ಯ  ಭೂಮಿ  ಮೇಲೆ  ಇರುವವರೆಗೂ, ಇಂದು ಮತ್ತು ಭವಿಷ್ಯದಲ್ಲಿ ಹೀಗೇ ಎಲ್ಲಾ ಕಾಲಕ್ಕೂ ಈ ಕಾವ್ಯವು ಪ್ರಸ್ತುತವಾಗಿರಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಅವರು ಬುಧವಾರ ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ  ಪಂಗಡಗಳ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಯಾವುದೇ ವ್ಯಕ್ತಿ   ಜ್ಞಾನಾರ್ಜನೆ ಮೂಲಕ ಉನ್ನತ ಸಾಧನೆ ಮಾಡಲು ರಾಮಾಯಣ ಕಾವ್ಯ ಪ್ರೇರಣೆಯಾಗಿದೆ. ಪರಿಶಿಷ್ಟ ಪಂಗಡದ ಜನರು ಗುರಿ ಮತ್ತು ಪರಿಶ್ರಮದಿಂದ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ  ಮುಂದೆ ಬರಬೇಕು. ಈ ಸಮುದಾಯದ ಜನರು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಭಿವೃದ್ಧಿಯಾಗಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವತ್ತ ಗಂಭೀರ ಚಿಂತನೆ ನಡೆಸಬೇಕು ಎಂದರು.

ರಾಮಾಯಣ ಮಹಾಕಾವ್ಯದಲ್ಲಿ ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಹಲವು ಮೌಲ್ಯಾದರ್ಶಗಳಿದ್ದು, ಪ್ರತಿಯೊಬ್ಬರೂ ಶ್ರೀ ರಾಮಾಯಣ ಮಹಾಕಾವ್ಯವನ್ನು ಆಳವಾಗಿ ಅಧ್ಯಯನ ಮಾಡಿ  ವಾಲ್ಮೀಕಿಯವರ ಆದರ್ಶ ಚಿಂತನೆಗಳನ್ನು ಅನುಸರಿಸುವ ಅಗತ್ಯವಿದೆ, ಸ್ವಾಮಿನಿಷ್ಠೆ, ಸೋದರ ನಿಷ್ಠೆ, ಪತಿನಿಷ್ಠೆ, ಪತ್ನಿನಿಷ್ಠೆ, ಪಿತೃ ವಾಕ್ಯ ಪರಿಪಾಲನೆ  ಸೇರಿದಂತೆ ಹಲವು ರೀತಿಯ ನಿಷ್ಠೆಗಳು ಈ ಕಾವ್ಯದಲ್ಲಿ  ಕಾಣ ಸಿಗುತ್ತವೆ. ಎಂದು ತಿಳಿಸಿದರು.

ಯೋಜನೆಗಳ ಅರಿವಿರಲಿ: ಬಲಹೀನ ತಳ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಲವಾರು ಯೋಜನೆಗಳನ್ನುರೂಪಿಸಿವೆ. ಬಲಹೀನ ತಳ ಸಮುದಾಯಗಳ ಯುವಕರು ಸ್ವಂತ ಉದ್ಯಮಗಳನ್ನು ಆರಂಭಿಸಿ ಆರ್ಥಿಕವಾಗಿ ಸದೃಢರಾಗಬೇಕೆಂಬ ಉದ್ದೇಶಕ್ಕಾಗಿ 10 ಲಕ್ಷದಿಂದ    1 ಕೋಟಿವರೆಗೆ  ಸಾಲ ನೀಡುವ *ಸ್ಟಾಂಡ್ ಅಪ್ ಇಂಡಿಯಾ* ಎಂಬ ಯೋಜನೆಯನ್ನ    ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಇದಕ್ಕಾಗಿ 27 ಸಾವಿರ ಕೋಟಿಗಳನ್ನ  ಕೇಂದ್ರ ಸರ್ಕಾರ ಮೀಸಲಿಟ್ಟಿದೆ.ಇಂತಹ ಹಲವಾರು ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ ಅರಿತು ಸದ್ಬಳಕೆ ಮಾಡಿಕೊಂಡು ಪ್ರಗತಿ ಹೋಂದಬೇಕು ಎಂದು ಯುವಕರಿಗೆ  ಸಚಿವರು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ವಾಲ್ಮೀಕಿ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಚಿಕ್ಕಬಳ್ಳಾಪುರ ನಗರದ ಹೃದಯ ಭಾಗದಲ್ಲಿ 30 ಗುಂಟೆ ಜಮೀನು ಮಂಜೂರಾತಿಯ ಆದೇಶ ಪತ್ರವನ್ನು ಸಂಬಂಧಪಟ್ಟ  ಇಲಾಖೆಗೆ ಹಸ್ತಾಂತರಿಸಿದರು. ಈ ಆದೇಶ  ಪತ್ರವನ್ನು   ಸಕಾಲದಲ್ಲಿ  ಸಿದ್ದಪಡಿಸಿ ಜಯಂತಿಯಂದು  ನೀಡಲು ಸ್ಪಂದಿಸಿದ್ದಕ್ಕೆ ಜಿಲ್ಲಾಧಿಕಾರಿಗಳನ್ನು ಈ ವೇಳೆ ಅಭಿನಂದಿಸಿದರು.  ಎಸ್.ಎಸ್. ಎಲ್.ಸಿ, ಪಿಯುಸಿ ಮತ್ತು ಪದವಿ, ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಪರಿಶಿಷ್ಟ ಪಂಗಡ ಸಮುದಾಯದಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಮಹರ್ಶಿ ವಾಲ್ಮೀಕಿ  ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ಗಳನ್ನುವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅರ್. ಲತಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಸಿಇಒ ಪಿ.ಶಿವಶಂಕರ್, ನಗರಸಭೆ ಅಧ್ಯಕ್ಷ ಅನಂದ್ ರೆಡ್ಡಿ ಬಾಬು,ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಅಶ್ವತಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀಧರ್ , ಚಿಕ್ಕಬಳ್ಳಾಪುರ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರಾದ ಕೆ.ವಿ.ಗವಿರಾಯಪ್ಪ, ಖಜಾಂಚಿ ಕೆ.ಎನ್.ಆವಲಕೊಂಡರಾಯಪ್ಪ, ಸಂಘಟನಾ ಕಾರ್ಯದರ್ಶಿ ಮುನಿವೆಂಟಕಸ್ವಾಮಿ, ಸದಸ್ಯರಾದ ನರಸಿಂಹರಾಜು, ಸಮುದಾಯದ ಮುಖಂಡರಾದ ಶಿವಕುಮಾರ್ ,ಶ್ರೀನಿವಾಸ್, ಕೆ.ಟಿ.ನಾರಾಯಣಸ್ವಾಮಿ, ಪಿ.ಮುನಿರಾಜು (ಜಿ.ಪಂ.ಮಾಜಿ ಸದಸ್ಯರು), ಮುನಿಕೃಷ್ಣ (ಮಾಜಿ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರು), ಚಿಕ್ಕಬಳ್ಳಾಪುರ ತಾಲ್ಲೂಕು ವಾಲ್ಮೀಕಿ ಸಂಘದ ಅಧ್ಯಕ್ಷರಾದ ಮೂರ್ತಿ.ಜಿ, ಉಪಾಧ್ಯಕ್ಷರಾದ ನಾರಾಯಣಸ್ವಾಮಿ, ವಾಲ್ಮೀಕಿ ನಾಯಕ ಸಂಘದ ವಿವಿಧ  ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು/ಸಿಬ್ಬಂದಿ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದೊಡ್ಡಬಳ್ಳಾಪುರ: ಶ್ರೀ ಸಿದ್ದೇಶ್ವರ ಭವನ ಉದ್ಘಾಟನೆ

ದರ್ಗಾಜೋಗಿಹಳ್ಳಿಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿ ಸೇವಾ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಬಸವ ಜಯಂತಿ ಅಂಗವಾಗಿ ಸಿದ್ದೇಶ್ವರ ದೇವಾಲಯದ 15ನೇ ವಾರ್ಷಿಕೋತ್ಸವ ಹಾಗೂ ಶ್ರೀ ಸಿದ್ದೇಶ್ವರ ಭವನದ (Sri Siddeshwara Bhavan) ಉದ್ಘಾಟನಾ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

[ccc_my_favorite_select_button post_id="121189"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!