ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಮುಖಂಡ, ದರ್ಗಾಜೋಗಹಳ್ಳಿ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ನಾಗೇಶ್ ಕಂದಾಯ ಸಚಿವ ಆರ್.ಅಶೋಕ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬರಲಿರುವ ಜಿಲ್ಲಾಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸಂದರ್ಭದಲ್ಲಿಯೇ ಕಾಂಗ್ರೆಸ್ ಪಕ್ಷದ ಮುಖಂಡ ನಾಗೇಶ್ ಬಿಜೆಪಿ ಸೇರಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಇಂದು ಬೆಂಗಳೂರಿನ ಸಚಿವ ಆರ್.ಅಶೋಕ್ ನಿವಾಸದಲ್ಲಿ ನಾಗೇಶ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ರಾಜ್ಯಕಾರ್ಯಕಾರಣಿ ಸದಸ್ಯ ಬಿ.ಸಿ.ನಾರಾಯಣಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಗೋಪಿ, ವಿಭಾಗ ಪ್ರಭಾರಿ ಕೇಶವ ಪ್ರಸಾದ್ ಜಿ, ತಾಲ್ಲೂಕು ಅಧ್ಯಕ್ಷ ಟಿ.ಎನ್.ನಾಗರಾಜ್, ಮುಖಂಡರಾದ ರಾಂಕಿಟ್ಟಿ, ವಿಶ್ವಾಸ್ ಗೌಡ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಫೇಸ್‌ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……