ಚಿಕ್ಕಬಳ್ಳಾಪುರ: ಕೋವಿಡ್ ಸಾಂಕ್ರಾಮಿಕವನ್ನು ಶಾಶ್ವತವಾಗಿ ತೊಲಗಿಸುವ ಏಕೈಕ ಮಾರ್ಗ ಕೋವಿಡ್ ಲಸಿಕಾಕರಣ ಎಂಬುದನ್ನು ಮನಗಂಡ ಕೇಂದ್ರ ಮತ್ತು ರಾಜ್ಯಸರ್ಕಾರಗಳು ಕಳೆದ ಜನವರಿ 16 ರಿಂದ ಆರಂಭಿಸಿದ ಲಸಿಕಾಕರಣ ಪ್ರಕ್ರಿಯೆಇಡೀ ದೇಶಾದ್ಯಂತ ಭರದಿಂದ ಯಶಸ್ವಿಯಾಗಿ ಮುಂದುವರೆಯುತ್ತಿದ್ದು,
ಪ್ರಸ್ತುತ ದೇಶದಲ್ಲಿ100 ಕೋಟಿ ಡೋಸ್ ಕೋವಿಡ್ ಲಸಿಕೆಯನ್ನು ಹಾಕುವ ಗುರಿಯನ್ನು ಅಕ್ಟೊಬರ್ 21 ರಂದು ದಾಟಿದ ನೆನಪಿಗಾಗಿ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾಧಿಕಾರಿ ಆರ್.ಲತಾ ಅವರು ತ್ರಿವರ್ಣ ಗಳ ಬಲೂನ್ ಗಳನ್ನು ಗಗನಕ್ಕೆ ಹಾರಿ ಬಿಡುವ ಮೂಲಕ ಕೋವಿಡ್ ಲಸಿಕಾಕರಣದ ಕುರಿತು ಜಾಗೃತಿ ಮೂಡಿಸುವ ಸಂಭ್ರಮಾಚರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್ ಕಬಾಡೆ ಹಾಗೂ ಜಿಲ್ಲಾಡಳಿತ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ತ್ರಿವರ್ಣಗಳ ನೂರಾರು ಬಲೂನ್ ಗಳನ್ನು ಏಕಕಾಲಕ್ಕೆ ಹಾರಿ ಬಿಡುವ ಮೂಲಕ ಕೋವಿಡ್ ಲಸಿಕಾಕರಣದ ಕುರಿತು ಜಾಗೃತಿ ಮೂಡಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……