ದೊಡ್ಡಬಳ್ಳಾಪುರ: ನಗರದ ಗಾಂಧಿನಗರ, ಬಸ್ ನಿಲ್ದಾಣದ ಸಮೀಪವಿರುವ ಖಿಲ್ಲೇ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಆಲಯ ನವೀಕರಣ ಹಾಗೂ ರುಕ್ಮಿಣೀ ಸತ್ಯಭಾಮ ಸಮೇತ ವೇಣುಗೋಪಾಲಸ್ವಾಮಿ, ಪದ್ಮಾವತಿ ಸಮೇತ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ಜೀರ್ಣೋದ್ಧಾರ ಪುನರ್ ಪ್ರತಿಷ್ಟಾಪನಾ ಮಹೋತ್ಸವ ಅ.25ರಂದು ಬೆಳಿಗ್ಗೆ 10 ಗಂಟೆಗೆ ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮಿ ಆಶೀರ್ವಚನದೊಂದಿಗೆ ನೆರವೇರಲಿದೆ.
ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ಅ.23ರಂದು ಸಂಜೆ 5ಗಂಟೆಗೆ ಸ್ವಸ್ತೀವಾಚನ, ಯಾಗಪ್ರವೇಶ ಮೊದಲಾದ ಕಾರ್ಯಕ್ರಮಗಳು ಆರಂಭವಾಗಲಿವೆ.
ಅ.24ರಂದು ಬೆಳಿಗ್ಗೆ 8 ಗಂಟೆಯಿಂದ ಯಾಗಶಾಲಾ ಪ್ರವೇಶ,ವಿಮಾನ ಕಳಶ ಸ್ಥಾಪನೆ, ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿವೆ.
ಅ.25ರಂದು ಪ್ರಾಣ ಪ್ರತಿಷ್ಟಾಪನಾ ಹೋಮ, ಪೂರ್ಣಾಹುತಿ, ಗುರುಗಳ ಆಶೀರ್ವಾದ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಖಿಲ್ಲೇ ವೇಣುಗೋಪಾಲಸ್ವಾಮಿ ದೇವಾಲಯ ಜೀರ್ಣೋದ್ದಾರ ಸಮಿತಿಯ ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….