ಬೆಂ.ಗ್ರಾ.ಜಿಲ್ಲೆ: “ವೀರವನಿತೆ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ” ಕಾರ್ಯಕ್ರಮಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು “ಕಿತ್ತೂರು ರಾಣಿ ಚೆನ್ನಮ್ಮ” ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಮಂಜುನಾಥ್ ಆರಾಧ್ಯ, ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್ ಸೇರಿದಂತೆ ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…