ದೊಡ್ಡಬಳ್ಳಾಪುರ: ಶನಿವಾರದಂದು ರಾತ್ರಿ ಘಾಟಿ ಸುಬ್ರಹ್ಮಣ್ಯದ ಬಳಿ ನಡೆದ ಅಪಘಾತದಲ್ಲಿ ಬೆಳಚಿಕ್ಕನಹಳ್ಳಿ ಗ್ರಾಮದ ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಮಾಹಿತಿ ತಿಳಿದ ಗೌರಿಬಿದನೂರು ಕ್ಷೇತ್ರದ ಶಾಸಕ ಎನ್.ಹೆಚ್.ಶಿವಶಂಕರ್ ರೆಡ್ಡಿ ಆಸ್ಪತ್ರೆಗೆ ದೌಡಾಯಿಸಿ ಚಿಕಿತ್ಸೆಗೆ ದಾಖಲಾಗಿದ್ದವರ ಯೋಗಕ್ಷೇಮ ವಿಚಾರಿಸಿರುವ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ನಾಲ್ಕೈದು ದಿನಗಳಿಂದ ಕಾಂಗ್ರೆಸ್ ಪಕ್ಷದ ನಿರ್ದೇಶನದ ಅನುಸಾರ ಹಾನಗಲ್ ವಿಧಾನಸಭಾ ಉಪ ಚುನಾವಣಾ ಪ್ರಚಾರದಲ್ಲಿ ಶಿವಶಂಕರ ರೆಡ್ಡಿ ಅವರು ನಿರತರಾಗಿದ್ದರು. ಇದೇ ವೇಳೆ ಶನಿವಾರ ಘಾಟಿ ಬಳಿ ನಡೆಯುತ್ತಿದ್ದ ಮದುವೆಗೆ ಬಂದಿದ್ದ ಬಸ್ ಅಪಘಾತಕ್ಕೆ ಈಡಾಗಿದ್ದು, ಇಬ್ಬರು ಸಾವನಪ್ಪಿ, ಹಲವಾರು ಗಾಯಗೊಂಡು ನಗರದ ಸರ್ಕಾರಿ ಆಸ್ಪತ್ರೆ ದಾಖಲಾಗಿದ್ದರು.
ವಿಷಯ ತಿಳಿದ ಶಿವಶಂಕರ ರೆಡ್ಡಿ ಪ್ರಚಾರ ಕಾರ್ಯ ಕೈಬಿಟ್ಟು ದೊಡ್ಡಬಳ್ಳಾಪುರ ಆಸ್ಪತ್ರೆಗೆ ದೌಡಾಯಿಸಿ, ಚಿಕಿತ್ಸೆಗೆ ದಾಖಲಾಗಿದ್ದ ಗಾಯಾಳುಗಳಿಗೆ ಹಣ್ಣು ನೀಡಿ ಸಾಂತ್ವನ ತಿಳಿಸಿದರು.
ಈ ವೇಳೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್ ಅವರೊಂದಿಗೆ ಮಾತನಾಡಿದ ಅವರು, ಗಾಯಾಳುಗಳ ಪರಿಸ್ಥಿತಿ ಬಗ್ಗೆ ಕೂಲಂಕಷವಾಗಿ ಮಾಹಿತಿ ಪಡೆದು ಸೂಕ್ತವಾದ ಚಿಕಿತ್ಸೆ ನೀಡುವಂತೆ ಮನವಿ ಮಾಡಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅದ್ಯಕ್ಷ ಕೇಶವರೆಡ್ಡಿ, ಮುಖಂಡರಾದ ಗಿರೀಶ್ ರೆಡ್ಡಿ, ವೆಂಕಟ್ (ವೆಂಕಿ) ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…