ವದಂತಿಗಳಿಗೆ ಕಿವಿಗೊಡಬೇಡಿ ಶ್ರೀನಿವಾಸ ಸಾಗರ ಮತ್ತು ರಂಗಧಾಮ ಕೆರೆ ಸಂಪೂರ್ಣ ಸುರಕ್ಷಿತ: ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಶ್ರೀನಿವಾಸಸಾಗರ ಮತ್ತು ರಂಗಧಾಮ ಕೆರೆಗೆ ಶನಿವಾರ ಸುರಿದ ಭಾರಿ  ಮಳೆಯಿಂದಾಗಿ ಯಾವುದೇ ಹಾನಿಯಾಗಿಲ್ಲ, ಎರಡೂ ಕೆರೆಗಳ ಪ್ರದೇಶಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗಿದ್ದು ಎರಡೂ ಕೆರೆಕಟ್ಟೆಗಳು ಸುರಕ್ಷಿತವಾಗಿವೆ. ನೆರೆ ಹಾವಳಿಯನ್ನು ಎದುರಿಸಲು ಜಿಲ್ಲಾಡಳಿತ ಸರ್ವ  ರೀತಿಯಲ್ಲೂ ಸನ್ನದ್ಧವಾಗಿದೆ.ಸಾರ್ವಜನಿಕರು ಯಾವುದೇ ಗಾಳಿಸುದ್ದಿಗಳಿಗೆ ಕಿವಿಗೊಡಬಾರದೆಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ಶ್ರೀನಿವಾಸಸಾಗರ ಮತ್ತು ರಂಗಧಾಮ ಕೆರೆಗಳಿಗೆ ಭೇಟಿ ನೀಡಿ  ಕೆರೆಕಟ್ಟೆಗಳನ್ನು ಪರಿಶೀಲಿಸಿದ ನಂತರ  ಅವರು ಮಾತನಾಡಿದರು.

ತಾಲ್ಲೂಕಿನ ಶ್ರೀನಿವಾಸಸಾಗರ ಕೆರೆ ಮತ್ತು ರಂಗಧಾಮ ಕೆರೆಗಳ ಕಟ್ಟೆಗಳಿಗೆ ಮಳೆಯಿಂದ ಹಾನಿಯಾಗಿದೆ ಎಂಬ ವದಂತಿಗಳು ಹರಡಿದ್ದ ಹಿನ್ನೆಲೆಯಲ್ಲಿ ಕೂಡಲೇ ಎರಡೂ ಕೆರೆಕಟ್ಟೆಗಳನ್ನು ಖುದ್ದು ಪರಿಶೀಲಿಸುವಂತೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಎರಡೂ ಕೆರೆಗಳ ಪ್ರದೇಶಕ್ಕೆ ಸಣ್ಣ ನೀರಾವರಿ ಇಲಾಖೆ  ಹಾಗೂ ಇನ್ನಿತರ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಎರಡೂ ಕೆರೆಗಳು ಸುರಕ್ಷಿತವಾಗಿವೆ. ಮಳೆಯಿಂದ ಕೆರೆಗಳ‌ ಕಟ್ಟೆಗಳಿಗೆ ಯಾವುದೇ ಹಾನಿಯಾಗಿಲ್ಲ. ಈ‌ ಕೆರೆಗಳಿಗೆ ಹಾನಿಯಾಗಿದೆ ಎಂದು ಹರಿದಾಡುತ್ತಿರುವ ಸುದ್ದಿಗಳು ಕೇವಲ ವದಂತಿಗಳಷ್ಟೇ. ಇಂತಹ ಗಾಳಿ ಮಾತುಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಇಂತಹವುಗಳನ್ನು ಯಾವುದೇ ಕಾರಣಕ್ಕೂ ಹರಡಬಾರದು ಎಂದು ತಿಳಿಸಿದರು.

ನೆರೆ ಹಾವಳಿ ಎದುರಿಸಲು ಅಧಿಕಾರಿಗಳಿಗೆ   ಕಟ್ಟು  ನಿಟ್ಟಿನ  ಸೂಚನೆ: ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಧಾರಕಾರ ಮಳೆಗೆ ನಗರದ ಹಳವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಆ ಪ್ರದ್ರೇಶಗಳಿಗೆ  ಹಾಗೂ ಶ್ರೀ ನಿವಾಸ ಸಾಗರ ಮತ್ತು ರಂಗಧಾಮ  ಕೆರೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮುಂದೇ  ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ  ಮತ್ತು   ಪರಿಹಾರ ಕ್ರಮಗಳ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.

ಬಾರೀ ಮಳೆಯಿಂದ ಎಂ.ಜಿ.ರಸ್ತೆಯಲ್ಲಿರುವ ಡಿವೈನ್ ಸಿಟಿಗೆ ನೀರು ನುಗ್ಗಿದ್ದು ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ನಂತರ ನಿಮ್ಮಾಕಲಕುಂಟೆ, ವಿನಾಯಕ ಲೇಔಟ್, ಕಣಜೇನಹಳ್ಳಿ, ಕಂದವಾರ ಕೆರೆ, ಬಿಬಿ ರಸ್ತೆಯ ಶನಿಮಹಾತ್ಮಾ ಸ್ವಾಮಿ ದೇವಾಲಯದ ಬಳಿ ಕಂದವಾರ ಕೆರೆಯಿಂದ ಗೋಪಾಲಕೃಷ್ಣ ಕೆರೆಗೆ ಹಾದು ಹೋಗುವ ರಾಜ ಕಾಲುವೆ, ಶ್ರೀನಿವಾಸ  ಸಾಗರ  ಮತ್ತು ರಂಗ ಧಾಮ ಕೆರೆಯನ್ನು ವೀಕ್ಷಿಸಿ ಅಧಿಕಾರಿಗಳಿಗೆ ನೆರೆಹಾವಳಿ ಎದುರಿಸುವ  ಬಗ್ಗೆ  ಸೂಚನೆ ನೀಡಿದರು.

ನಗರದಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ರಂಗಧಾಮ ಕೆರೆಯು ಕೋಡಿ ಹರಿದಿದ್ದ ಪರಿಣಾಮ ನಗರದ ಕಣಜೇನಹಳ್ಳಿ, ನಿಮ್ಮಾಕಲಕುಂಟೆ, ಡಿವೈನ್ ಸಿಟಿಗೆ ಸೇರಿದಂತೆ ಹಲವೆಡೆ ನೀರು ನುಗ್ಗಿದ್ದು, ಹಾನಿಯಾಗಿರುವಂತಹ ಪ್ರದೇಶಗಳಿಗೆ ಜಿಲ್ಲಾಧಿಕಾರಿಯವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನೂ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ಪ್ರಕೃತಿ ವಿಕೋಪದಿಂದ ಎದುರಾಗುವ ಅನಾಹುತಗಳ ಬಗ್ಗೆ ಯಾವ ರೀತಿ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಯೋಜನಾ ವರದಿ ಸಲ್ಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಯಾವ ಯಾವ ಕೆರೆ ಕಟ್ಟೆಗಳಲ್ಲಿ ಕೋಡಿ ಹರಿಯಬಹುದು ಎಂಬುದರ ಬಗ್ಗೆ ಮುಂಚಿತವಾಗಿಯೇ ಖುದ್ದಾಗಿ ಭೇಟಿ  ನೀಡಿ  ಮಾಹಿತಿ ಪಡೆದು ಅಗತ್ಯ ಮುನ್ನೆಚ್ಚರಿಕಾ ಸಿದ್ಧತೆ ಮಾಡಿಕೊಂಡು ಮುಂದಾಗಬಹುದಾದ ಅವಘಡಗಳನ್ನು  ನಿವಾರಣೆ  ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಜಿಲ್ಲೆಯಲ್ಲಿ ತೀವ್ರ ಮಳೆಯಿಂದಾದ ಹಾನಿಯ ವಿವರವನ್ನು ಪ್ರತಿ ದಿನ  ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿರುವ ಜನರಿಗೆ ಯಾವುದೇ ರೀತಿಯಾಗಿ ತೊಂದರೆಯಾಗದಂತೆ ಅಗತ್ಯ ಕ್ರಮವಹಿಸಲಾಗುವುದು ಯಾರು  ಆತಂಕಪಡಬೇಕಾಗಿಲ್ಲ ಎಂದು ಜನರಲ್ಲಿ ಧೈರ್ಯ  ತುಂಬಿದರು.

ಕಳೆದ 20-30 ವರ್ಷಗಳಿಂದ ತುಂಬದೇ ಇರುವಂತಹ ಕೆರೆಗಳು ತುಂಬಿರುವುದರ ಬಗ್ಗೆ ಖುಷಿಯಾಗಿದೆ.ಭಾರಿ ಮಳೆಯಿಂದಾಗಿ ರಾಜಕಾಲುವೆಯು ಬ್ಲಾಕ್ ಆಗದ ರೀತಿಯಲ್ಲಿ  ನಿಗಾವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ  ಸೂಚನೆ ನೀಡಿದ್ದೇನೆ ಎಂದರು. 

ಈ ಸಂದರ್ಭದಲ್ಲಿ ತಹಸೀಲ್ದಾರ್ ಗಣಪತಿಶಾಸ್ತ್ರಿ,  ಪೌರಾಯುಕ್ತರಾದ ಮಹಂತೇಶ್, ಎಚ್.ಎನ್ ವ್ಯಾಲಿ ಇಂಜಿನಿಯರ್ ರವಿಂದ್ರನಾಥ, ಸಣ್ಣ ನೀರಾವರಿ ಇಲಾಖೆಯ ಎಇಇ ಶ್ರೀನಿವಾಸರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ...

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="111004"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!