ದೊಡ್ಡಬಳ್ಳಾಪುರ: ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವನ್ನು ನಿರ್ಲಕ್ಷ್ಯಿಸುವ ಕಾಂಗ್ರೆಸ್ ಪಕ್ಷದ ದುರಂಕಾರಕ್ಕೆ ಇಂದಿನ ನಗರಸಭೆ ಚುನಾವಣೆ ಫಲಿತಾಂಶ ಪಾಠವಾಗಿದೆ ಎಂದು ಜೆಡಿಎಸ್ ಮುಖಂಡ ಹರೀಶ್ ಗೌಡ ತಿಳಿಸಿದ್ದಾರೆ.
ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಬಿಜೆಪಿ/ಜೆಡಿಎಸ್ ನಡುವಿನ ಮೈತ್ರಿ ಕುರಿತಂತೆ ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ನಗರಸಭೆಯಲ್ಲಿ ಹಿಂದೆ ಅಧ್ಯಕ್ಷರ ಚುನಾವಣೆಯಲ್ಲಿಯೂ ಜೆಡಿಎಸ್ ಅಲ್ಪಸಂಖ್ಯಾತರಿಗೆ ಅಧ್ಯಕ್ಷ ಸ್ಥಾನ ನೀಡಿತ್ತು. ಈಗ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಆದರೆ ಕಾಂಗ್ರೆಸ್ ಅಲ್ಪಸಂಖ್ಯಾತರ ಮತಪಡೆದು ಯಾವುದೇ ಅಧಿಕಾರ ನೀಡುತ್ತಿಲ್ಲ.
ಜೆಡಿಎಸ್ ಪಕ್ಷದ ವರಿಷ್ಟರಾದ ಎಚ್.ಡಿ.ಕುಮಾರ ಸ್ವಾಮಿ, ಎಚ್.ಡಿ.ದೇವೇಗೌಡ ಅವರ ಜ್ಯಾತ್ಯಾತೀತ ನಿಲುವು ಇದ್ದೇ ಇದೆ. ಆದರೆ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದೆ ಎಂಬುದು ತಿಳಿದಿದೆ.
ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಕಾಂಗ್ರೆಸ್ ಪಕ್ಷದ ವರುಷ್ಠರು ಜೆಡಿಎಸ್ ವರಿಷ್ಠರ ಸಂಪರ್ಕಿಸಿಲ್ಲ. ಇದಕ್ಕೆ ವಿರುದ್ಧವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಒಟ್ಟಾಗಿ ಸಾಗಲು ಮನವಿ ಸಲ್ಲಿಸಿದ್ದರ ಫಲವಾಗಿ ಜೆಡಿಎಸ್/ಬಿಜೆಪಿ ಮೈತ್ರಿಗೆ ಕಾರಣ ಅದು ಬಿಟ್ಟು ಜೆಡಿಎಸ್ ಪಕ್ಷದ ಜ್ಯಾತ್ಯಾತೀತತೆ ಪ್ರಶ್ನಿಸುವವರು ಡೋಂಗಿ ಜ್ಯಾತ್ಯಾತೀತ ಅನುಸರಿಸುತ್ತಿದ್ದಾರೆ ಎಂದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….