ಬೆಂಗಳೂರು: ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗಗಳಾದ ಗೋವುಗಳ ಮಹತ್ವ ಹಾಗೂ ಗೋವುಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ನ.5ರ ದೀಪಾವಳಿಯಂದು ರಾಜ್ಯದ ಎಲ್ಲ ಹಿಂದೂ ದೀಪಾವಳಿ(ಬಲಿಪಾಡ್ಯಮಿ)ಯಂದು ಗೋಮಾತೆಯನ್ನು ಪೂಜಿಸಿ ಆರಾಧಿಸಲು ಆದೇಶಿಸಲಾಗಿದೆ.
ಈ ಕುರಿತಂತೆ ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆ ಇಂದು ಆದೇಶ ಹೊರಡಿಸಿದ್ದು, ಹಿಂದೂ ಧರ್ಮದ ಪುರಾಣ, ಉಪನಿಷತ್ತುಗಳಲ್ಲಿ ಗೋವುಗಳಿಗೆ ವಿಶೇಷ ಸ್ಥಾನವಿದೆ. ಹಿಂದೂ ಧರ್ಮಗ್ರಂಥಗಳಲ್ಲಿ ಗೋವಿಗೆ ಮಾತೆಯ ಸ್ಥಾನ ನೀಡಲಾಗಿದೆ. ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುವುದರ ಜೊತೆ ವಾಸ್ತುದೋಷಕ್ಕೂ ಪರಿಹಾರ ದೊರೆಯುವುದೆಂಬ ನಂಬಿಕೆ ನಮ್ಮ ಸಮಾಜದಲ್ಲಿರುವುದರಿಂದ ಬಲಿಪಾಡ್ಯಮಿ ದಿನದಂದು ಇಲಾಖೆಯ ದೇವಾಲಯಗಳಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಲು ಹಿಂದೂ ಧಾರ್ಮಿಕ ಧರ್ಮಾದಾಯ ದತ್ತಿಗಳ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ಸನಾತನ ಧರ್ಮದ ಗೋಮಾತೆಯ ಪೂಜೆಯನ್ನು ಪೂಜಿಸುವ ಸಂಪ್ರದಾಯ ನಮ್ಮ ಮುಂದಿನ ಪೀಳಿಗೆಗೂ ಗೊತ್ತಾಗಬೇಕಿದೆ. ಈ ಹಿನ್ನೆಲೆಯಲ್ಲಿ ಈ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬರಲು ವರ್ಷದಲ್ಲಿ ಒಂದು ದಿನ ಇಲಾಖೆಯ ದೇವಾಲಯಗಳಲ್ಲಿ ಪೂಜಿಸುವುದನ್ನು ಕಡ್ಡಾಯ ಮಾಡುವುದರಿಂದೊಂದಿಗೆ ಗೋಮಾತೆಯ ಪೂಜೆಯನ್ನು ಪರಿಚಯಿಸಲು ಬಲಿಪಾಡ್ಯಮಿ ದಿನ ಸೂಕ್ತವಾಗಿರುವುದರಿಂದ ಆ ದಿನದಂದು ಗೋಪೂಜೆ ಮಾಡಲು ಆದೇಶ ಹೊರಡಿಸಲಾಗಿದೆ ಎಂದು ಸಚಿವೆ ಜೊಲ್ಲೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….