ಬೆಂ.ಗ್ರಾ.ಜಿಲ್ಲೆ: ಅ.27 ರಂದು ಸಾರ್ವಜನಿಕರಿಗೆ ಸಾಲ ಸಂಪರ್ಕ ಕಾರ್ಯಕ್ರಮ

ಬೆಂ.ಗ್ರಾ.ಜಿಲ್ಲೆ: 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ದಿನದಂದು ಪ್ರಧಾನಮಂತ್ರಿಯವರಿಂದ ವಿವಿಧ ಕಾರ್ಯಕ್ರಮಗಳ ಘೋಷಣೆ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ ಆದೇಶದ ಮೇರೆಗೆ ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿ ವತಿಯಿಂದ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕುಗಳ ಮುಂದಾಳತ್ವದಲ್ಲಿ ಎರಡು ಜಿಲ್ಲೆಯ ಎಲ್ಲಾ ಬ್ಯಾಂಕುಗಳ ಸಹಯೋಗದೊಂದಿಗೆ ಗ್ರಾಹಕರಿಗೆ “ಸಾಲ ಸಂಪರ್ಕ (ಕ್ರೆಡಿಟ್ ಔಟ್ ರೀಚ್) ಕಾರ್ಯಕ್ರಮ”ವನ್ನು 2021ರ‌ ಅಕ್ಟೋಬರ್ 27 ರಂದು ಬೆಂಗಳೂರು ಸಿಟಿ ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ “ಜ್ಞಾನಜ್ಯೋತಿ ಸಭಾಂಗಣ” ದಲ್ಲಿ ಏರ್ಪಡಿಸಲಾಗಿದೆ.

ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕುಗಳು, ಖಾಸಗಿ ವಲಯದ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಡಿಸಿಸಿಬಿ, ನಬಾರ್ಡ್, ಕೆವಿಐಸಿ, ಕೆವಿಐಬಿ, ಡಿಐಸಿ, ಕೃಷಿ, ತೋಟಗಾರಿಕೆ, ಮೀನುಗಾರಿಕೆ ಇಲಾಖೆ ಹಾಗೂ ಇತರೆ ಸರ್ಕಾರಿ ಇಲಾಖೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ.

ಬ್ಯಾಂಕುಗಳಲ್ಲಿ ಲಭ್ಯವಿರುವ ವಿವಿಧ ಸಾಲ ಸೌಲಭ್ಯಗಳ ಕುರಿತು ಗ್ರಾಹಕರಲ್ಲಿ ವಿಸ್ತೃತ ಅರಿವು ಮೂಡಿಸಲು, ಸಾಲದ ಅರ್ಜಿಗಳನ್ನು ಸ್ವೀಕರಿಸಲು, ಸಾಲ ಮಂಜೂರಾತಿ  ಮತ್ತು ಸಂಭಾವ್ಯ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸುವ ಸಲುವಾಗಿ ಈ ಸಾಲ ಸಂಪರ್ಕ(ಕ್ರೆಡಿಟ್ ಔಟ್ ರೀಚ್) ಸಭೆಯನ್ನು ಏರ್ಪಡಿಸಲಾಗಿದೆ.

ಸಾಲ ಸಂಪರ್ಕ(ಕ್ರೆಡಿಟ್ ಔಟ್ ರೀಚ್) ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆತ್ಮ ನಿರ್ಭರ ಯೋಜನೆಗಳಡಿಯಲ್ಲಿ ಬರುವ  ಪಿಎಂ ಸ್ವಾನಿಧಿ,  ಜಿ.ಇ.ಸಿ.ಎಲ್‌., ಕೃಷಿ ಮೂಲಸೌಕರ್ಯ ನಿಧಿ ಯೋಜನೆ(ಎಐಎಪ್), ಪಶು ಸಂಗೋಪನಾ ಮೂಲಸೌಕರ್ಯ ನಿಧಿ ಯೋಜನೆ(ಎಎಚ್ಐಡಿಎಫ್) ಮತ್ತು ಪಿಎಂಎಂವೈ(ಮುದ್ರಾ) ಸ್ಟ್ಯಾಂಡ್ ಅಪ್ ಇಂಡಿಯ, ಪಿಎಂಇಜಿಪಿ, ಕೃಷಿ ಮತ್ತು ಕೃಷಿಯೇತರ, ಎ,ಎಸ್ಎಂಇ, ರಿಟೈಲ್, ಶಿಕ್ಷಣ ಮತ್ತು ವಸತಿ ಸಾಲಗಳಲ್ಲದೆ ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ ಮತ್ತು ಅಟಲ್ ಪಿಂಚಣಿ ಯೋಜನೆ ಬಗ್ಗೆ ಜನ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.

ಈ ವಿಶೇಷ ಜಾಗೃತಿ ಅಭಿಯಾನವನ್ನು ನಡೆಸಲು ಎಲ್ಲಾ ಬ್ಯಾಂಕುಗಳಿಂದ ಸಕಲ ಪ್ರಯತ್ನಗಳನ್ನು ಮಾಡಲಾಗುವುದು. ಗ್ರಾಹಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರದ ಮತ್ತು ಬ್ಯಾಂಕುಗಳ ವಿವಿಧ ಯೊಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!