ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಇನ್ನುಳಿದ ಚುನಾವಣೆಗೆ ದಿಕ್ಸೂಚಿ: ಸಚಿವ ಆರ್.ಅಶೋಕ್

ದೊಡ್ಡಬಳ್ಳಾಪುರ: ನಗರಸಭೆಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಸುಧಾರಾಣಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಜೆಡಿಎಸ್‍ನ ಫರ್ಹಾನಾ ತಾಜ್ ಅವರನ್ನು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿದರೆ, ಪಕ್ಷದ ಕಾರ್ಯಕರ್ತರು ಬಾವುಟಗಳನ್ನು ಹಿಡಿದು ಪಟಾಕಿ ಸಿಡಿಸಿ, ಸಹಿ ಹಂಚಿ ಸಂಭ್ರಮಿಸಿದರು.

ಎಲ್ಲರನ್ನೂ ಒಗ್ಗೂಡಿಸಿ ಕೆಲಸ ಮಾಡುವೆ: ನಗರಸಭೆಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಸುಧಾರಾಣಿ ಮಾತನಾಡಿ, ನಗರಸಭೆಯಲ್ಲಿ ಜೆಡಿಎಸ್ ಮೈತ್ರಿಯೊಂದಿಗೆ ಅಧಿಕಾರ ಪಡೆದಿದ್ದು, ಎಲ್ಲರನ್ನೂ ಒಗ್ಗೂಡಿಸಿ ಕೆಲಸ ಮಾಡುವ ಮೂಲಕ ನಗರದ ಏಳಿಗೆಗೆ ಶ್ರಮಿಸುತ್ತೇನೆ ಎಂದರು.

ಇನ್ನುಳಿದ ಚುನಾವಣೆಗೆ ದಿಕ್ಸೂಚಿ: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮಾತ್ರ ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದಲ್ಲಿ ಇತರೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿಕ್ಸೂಚಿಯಾಗಲಿದ್ದು, ದೊಡ್ಡಬಳ್ಳಾಪುರ ನಗರಸಭೆಯಂತೆ, ಇತರೆಡೆಯಲ್ಲೂ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಜೆಪಿಯ ಎಸ್.ಸುಧಾರಾಣಿ, ಉಪಾಧ್ಯಕ್ಷೆ ಫರ್ಹಾನಾ ತಾಜ್ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಯಾವುದೇ ಪಕ್ಷಕ್ಕೂ ಬಹುಮತ ಬರದಿರುವುದರಿಂದ ಮೈತ್ರಿ ಅನಿವಾರ್ಯವಾಗಲಿದೆ. ಜೆಡಿಎಸ್ ವರಿಷ್ಟ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ನಡೆದುಕೊಂಡಿದ್ದಾರೆ. ಇಲ್ಲಿನ ಕಾಂಗ್ರೆಸ್ ಶಾಸಕರಿಗೆ ಮುಖಭಂಗವಾಗಿದೆ ಎಂದರು.

ರಾಜ್ಯದ ಇತರೇ ಮಹಾನಗರಪಾಲಿಕೆಯಲ್ಲೂ ಜೆಡಿಎಸ್ ಬೆಂಬಲ ನೀಡುವ ವಿಶ್ವಾಸ ಇದೆ. ಸ್ಥಳೀಯ ಸದಸ್ಯರು ಸಹ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡರೆ ನಗರದ ಅಭಿವೃದ್ಧಿಯ ದೃಷ್ಠಿಯಿಂದ ಒಳಿತಾಗಲಿದೆ ಎನ್ನುವ ಅಭಿಪ್ರಾಯವನ್ನು ನೀಡಿದ್ದರಿಂದಲೇ ಇಂದು ಬಿಜೆಪಿ-ಜೆಡಿಎಸ್ ಒಟ್ಟಾಗಿ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಆಡಳಿತಕ್ಕೆ ಬಂದಿವೆ.  ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ನಗರಸಭೆಗೆ ಹೆಚ್ಚಿನ ಅನುದಾನಗಳು ದೊರೆತು ಅಭಿವೃದ್ದಿಯಾಗಲಿದೆ. ಮುಂದಿನ ಅವಧಿಯ ಆಯ್ಕೆ ಬಗ್ಗೆ ಸ್ಥಳೀಯ ಕೋರ್ ಕಮಿಟಿ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

ಕಾಂಗ್ರೆಸ್ ನಕಲಿ ಜ್ಯಾತ್ಯತೀತ ಪಕ್ಷ: ಕಾಂಗ್ರೆಸ್ ಪಕ್ಷ ಬೇಕಾದರೆ ಯಾರ ಜೊತೆ ಬೇಕಾದರೂ ಮೈತ್ರಿ ಮಾಡಿಕೊಳ್ಳಬಹುದು ಆದರೆ ಜೆಡಿಎಸ್ ಮೈತ್ರಿಗೆ ಏಕೆ ನಿರ್ಬಂಧ ಹಾಕಬೇಕು. ಜಾತ್ಯಾತೀತ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಮಹಾರಾಷ್ಟ್ರದಲ್ಲಿ ಶಿವಸೇನೆಯೊಂದಿಗೆ ಮೈತ್ರಿಮಾಡಿಕೊಂಡು ಆತಳಿತ ನಡೆಸುತ್ತಿದ್ದು, ಇವರಿಂದ ನಾವು ಜ್ಯಾತ್ಯತೀತ ಪಾಠ ಕಲಿಯಬೇಕಿಲ್ಲ. ರಾಜ್ಯದಲ್ಲಿ ಡಿಕೆಶಿ ಕಾಂಗ್ರೆಸ್, ಸಿದ್ದರಾಮಯ್ಯ ಕಾಂಗ್ರೆಸ್ ಎರಡು ಪಕ್ಷಗಳಿವೆ. ಇದೇ ರೀತಿ ದೆಹಲಿಯಲ್ಲಿ ಮೂರು ರೀತಿಯ ಕಾಂಗ್ರೆಸ್ ಪಕ್ಷಗಳಿದ್ದು, ಕಾಂಗ್ರೆಸ್ ಒಡೆದ ಮನೆಯಾಗಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ತಮಗೆ ಬೇಕಾದಗಲೆಲ್ಲ ಬಿ’ ಟೀಂ ಮಾಡಲು ಹೋಗಿ ಈಗ ರಾಜ್ಯದಲ್ಲಿ ಸಿ’ ಟೀಂ ಆಗಿದೆ. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಗೆಲುವು ನಿಶ್ಚಿತವಾಗಿದ್ದು, ಮತದಾರರು ಕಾಂಗ್ರೆಸ್ ನಾಯಕರನ್ನು ನಂಬುವುದಿಲ್ಲ ಎಂದರು.

ಮಾದರಿ ನಗರವಾನ್ನಾಗಿಸುವೆ: ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ನಾಗರಾಜ (ಎಂ.ಟಿ.ಬಿ)ಮಾತನಾಡಿ, ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಲಭಿಸಿವೆ. ಇದಕ್ಕೆ ಕಾರಣರಾದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದು, ದೊಡ್ಡಬಳ್ಳಾಪುರವನ್ನು ಮಾದರಿ ನಗರವನ್ನಾಗಿ ಮಾಡಲಾಗುವುದು. 2023ರ ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲೆಯ 4 ತಾಲೂಕುಗಳಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗುವ ವಿಶ್ವಾಸವಿದೆ. ನಗರರ ಸಭೆಯ ಅಭಿವೃದ್ದಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಕಾಂಗ್ರೆಸ್ ಡೋಂಗಿ ಜಾತ್ಯಾತೀತತೆ: ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಮಾತನಾಡಿ, ನಗರಸಭೆಯಲ್ಲಿ ಹಿಂದೆ ಅಧ್ಯಕ್ಷರ ಚುನಾವಣೆಯಲ್ಲಿಯೂ ಜೆಡಿಎಸ್ ಅಲ್ಪಸಂಖ್ಯಾತರಿಗೆ ಅಧ್ಯಕ್ಷ ಸ್ಥಾನ ನೀಡಿತ್ತು. ಈಗ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಆದರೆ ಕಾಂಗ್ರೆಸ್ ಅಲ್ಪಸಂಖ್ಯಾತರ ಕುತ್ತಿಗೆ ಕುಯ್ಯುತ್ತಿದೆ. ಪಕ್ಷದ ವರಿಷ್ಟರಾದ ಎಚ್.ಡಿ.ಕುಮಾರ ಸ್ವಾಮಿ, ಎಚ್.ಡಿ.ದೇವೇಗೌಡ ಅವರ ಜಾತ್ಯಾತೀತ ನಿಲುವು ಇದ್ದೇ ಇದೆ. ಆದರೆ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದೆ ಎನ್ನುವುದು ಪ್ರಶ್ನಿಸಿಕೊಳ್ಳಲಿ ಎಂದರು.

ಈ ಸಂದರ್ಭದಲ್ಲಿ ಸಂಸದ ಬಿ.ಎನ್.ಬಚ್ಚೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ತಾಲೂಕು ಅಧ್ಯಕ್ಷ ಲಕ್ಷ್ಮೀಪತಿ, ಜಿ.ಪಂ.ಸದಸ್ಯ ಅಪ್ಪಯ್ಯಣ್ಣ, ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜ್, ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!