ಬೆಂ.ಗ್ರಾ.ಜಿಲ್ಲೆ: ತೋಟಗಾರಿಕೆ ಇಲಾಖೆ ವತಿಯಿಂದ 2021-22ನೇ ಸಾಲಿನ ತೋಟಗಾರಿಕಾ ಕಾರ್ಯಕ್ರಮವಾದ ಹನಿ ನೀರಾವರಿ ಯೋಜನೆಯನ್ನು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ಇಚ್ಛಿಸುವ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಮಾರ್ಗಸೂಚಿಯನ್ವಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಪಂಗಡದ ಹಾಗೂ ಸಣ್ಣ, ಅತಿ ಸಣ್ಣ ರೈತರಿಗೆ ಪ್ರಥಮ 2 ಹೆಕ್ಟೇರ್‌ಗೆ ನಿಗದಿಪಡಿಸಿರುವ ವೆಚ್ಚದ ಶೇ.90ರಷ್ಟು ಸಹಾಯಧನವನ್ನು ಹಾಗೂ ನಂತರ ಮೂರು ಹೆಕ್ಟೇರ್‌ಗೆ ಶೇ.45ರಷ್ಟು ಸಹಾಯಧನವನ್ನು ನೀಡಲಾಗುವುದು(ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಸಹಾಯಧನವನ್ನು ನೀಡಲಾಗುವುದು).
ಈ ಯೋಜನೆಯಡಿ ಸೌಲಭ್ಯವನ್ನು ಪ್ರತಿ ಫಲಾನುಭವಿ ಕುಟುಂಬಕ್ಕೆ 5 ಹೆಕ್ಟೇರ್ ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ ಮತ್ತು ಇತರೆ ವರ್ಗದ ರೈತರಿಗೆ ಶೇ. 45 ರಷ್ಟು ಸಹಾಯಧನವನ್ನು ಗರಿಷ್ಠ 5 ಹೆಕ್ಟೇರ್ ವರೆಗೂ ಸಹಾಯಧನ ನೀಡಲಾಗುವುದು.
ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತರಾಗಿದ್ದಲ್ಲಿ, ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಕಚೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ, ಹನಿ ನೀರಾವರಿ ಅಳವಡಿಸಲು ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ), ದೊಡ್ಡಬಳ್ಳಾಪುರ ತಾಲ್ಲೂಕು ದೂ.ಸಂ.: 080-27623770, ಮೊ.ಸಂ.: 9632410677, ದೇವನಹಳ್ಳಿ ತಾಲ್ಲೂಕು ದೂ.ಸಂ.: 080-27681204, ಮೊ.ಸಂ.:9448825101, ಹೊಸಕೋಟೆ ತಾಲ್ಲೂಕು ದೂ.ಸಂ.: 080-27904760, ಮೊ.ಸಂ.: 9538953949 ಹಾಗೂ ನೆಲಮಂಗಲ ತಾಲ್ಲೂಕು ದೂ.ಸಂ.: 080-27726213, ಮೊ.ಸಂ.: 9901754339 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….