ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸಿ: ವಿಜಯಾ.ಈ.ರವಿಕುಮಾರ್

ಬೆಂ.ಗ್ರಾ.ಜಿಲ್ಲೆ: ಕ್ರಿಯಾ ಯೋಜನೆಯಲ್ಲಿ ಇರುವಂತೆ ಇಲಾಖೆವಾರು ಯೋಜನೆಗಳ ಕುರಿತು ಮಾಹಿತಿ ಪಡೆದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಸೆಪ್ಟೆಂಬರ್-2021 ಮಾಹೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಯೋಜನೆಗಳ ಬಗ್ಗೆ  ಕಾರ್ಯಾಗಾರಗಳನ್ನು ನಡೆಸುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ರವಾನಿಸಿ, ತಿಳುವಳಿಕೆ ಮೂಡಿಸಬೇಕು ಎಂದು ಹೇಳಿದರು.ತೋಟಗಾರಿಕೆ ಇಲಾಖೆಯ ಬಿಲ್ ಬಾಕಿಯಿದ್ದು, ಅನುದಾನ ಬಿಡುಗಡೆ ಆದ ತಕ್ಷಣ ಕೆಲಸ ಪ್ರಾರಂಭಿಸಬೇಕು ಎಂದರಲ್ಲದೇ, ರೇಷ್ಮೆ ಹುಳು ಸಾಕಾಣಿಕಾ ಮನೆಗೆ ಸಹಾಯಧನ ನೀಡಬೇಕು ಹಾಗೂ ಪಶುಸಂಗೋಪನೆ ಇಲಾಖೆಯಿಂದ 15 ರಿಂದ 18 ಸಾವಿರ ಮೊತ್ತದ ಮಿಲ್ಕ್ ಮಿಷನ್ ನೀಡಲಾಗುತ್ತಿದ್ದು, ರಾಸುಗಳಿಗೆ ಸೋಂಕು ಹರಡುವುದನ್ನು ತಪ್ಪಿಸುವ ಉದ್ದೇಶದಿಂದ ಎರಡು ಕೌ ಮ್ಯಾಟ್ಸ್ (ರಬ್ಬರ್ ಮ್ಯಾಟ್ಸ್) ನೀಡಲು ಬಾಕಿ ಇರುವ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ತಿಳಿಸಿದರು. ಐದು ಎಕರೆ ಜಮೀನು ಹೊಂದಿರುವ ರೈತರಿಗೆ ಸಕಾಲ ಯೋಜನೆಯಡಿ ಶೇ. 90℅ ರಷ್ಟು ಸಹಾಯಧನ ನೀಡಲಾಗುತ್ತಿದ್ದು, ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಬಲೆ, ಹರಿಗೋಲಿನ ಕಿಟ್ ವಿತರಿಸಲಾಗುತ್ತಿದೆ ಎಂದು ಹೇಳಿದರು.

ಸರಳ ವಿವಾಹಕ್ಕೆ ಇತ್ತೀಚೆಗೆ ಜನರು ಆಸಕ್ತಿ ತೋರಿಸದಿರುವುದರಿಂದ, ಸರಳ ವಿವಾಹದ ಕುರಿತು ಪ್ರಚಾರ ನೀಡಬೇಕು ಹಾಗೂ ವಿಧವಾ ಪುನರ್ ವಿವಾಹದ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಮಾಹಿತಿ ಇರುವ ಕಾರಣ ಸರ್ಕಾರದಿಂದ ಕಲಾ ತಂಡಗಳ ಮುಖಾಂತರ ಬೀದಿ ನಾಟಕಗಳನ್ನು ಮಾಡಿಸುವ ಮೂಲಕ ದೌರ್ಜನ್ಯ ತಡೆ ಕಾಯ್ದೆ,1990ರ ಆಕ್ಟ್ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.ಅಂತರ್ಜಾತಿ ವಿವಾಹ ಪ್ರೋತ್ಸಾಹಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿಯ ಯುವಕರನ್ನು ಮದುವೆಯಾದರೆ ರೂ.2‌.5 ಲಕ್ಷ ಹಾಗೂ ಪರಿಶಿಷ್ಟ ಜಾತಿಯ ಯುವತಿಯನ್ನು ಮದುವೆಯಾದರೆ ರೂ.3 ಲಕ್ಷ ಗಳ ಸಹಾಯಧನ ನೀಡಲಾಗುತ್ತಿದೆ ಎಂದು ತಿಳಿಸಿದರು.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉದ್ಯಮಶೀಲತೆ ಯೋಜನೆಯಡಿ ಶೇ. 50 ರಷ್ಟು ಸಹಾಯಧನವಿದ್ದು, ಇನ್ನುಳಿದ ಶೇ‌. 50 ಅನ್ನು ಬ್ಯಾಂಕುಗಳು ನೀಡಲಿವೆ ಹಾಗೂ ಗಂಗಾ ಕಲ್ಯಾಣ ಯೋಜನೆಗೆ ರಾಜ್ಯ ಸರ್ಕಾರದಿಂದ ಟೆಂಡರ್ ಪ್ರಕ್ರಿಯೆ ಬಾಕಿ ಉಳಿದಿದೆ ಎಂದು ತಿಳಿಸಿದರು.

ಅಲೆಮಾರಿ/ಅರೆ ಅಲೆಮಾರಿಗಳು, ಸಫಾಯಿ ಕರ್ಮಚಾರಿಗಳು ಹಾಗೂ ಪೌರ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಶೀಘ್ರವಾಗಿ ತಲುಪಿಸುವ ಕೆಲಸವಾಗಬೇಕು ಎಂದರಲ್ಲದೇ ತ್ವರಿತವಾಗಿ ನಾಲ್ಕು ತಾಲ್ಲೂಕುಗಳಲ್ಲಿ ಪೌರಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಗಾರಗಳನ್ನು ನಡೆಸಬೇಕು ಎಂದು ಸೂಚಿಸಿದರು.

ಪರಿಶಿಷ್ಟ ಜಾತಿಯ ಅಂಗವಿಕರಿಗೆ ಆಧಾರ ಯೋಜನೆಯಡಿ ರೂ. 50,000 ಸಹಾಯಧನ ನಿಗದಿ ಪಡಿಸಿದ್ದು, ಸ್ವಯಂ ಉದ್ಯೋಗ ಕೈಗೊಳ್ಳುವ ವಿಕಲಚೇತನರಿಗೆ ರೂ. 50,000 ಸಹಾಯಧನ, 50,000 ಲೋನ್ ಹಾಗೂ ಅಂಗವಿಕಲರನ್ನು ವಿವಾಹವಾದವರಿಗೆ ರೂ.50,000 ಗಳ ಪ್ರೋತ್ಸಾಹಧನ ಇದರೊಂದಿಗೆ ಟಾಕಿಂಗ್ ಲ್ಯಾಪ್‌ಟಾಪ್ ಸಹ ನೀಡಲಾಗುತ್ತಿದೆ ಎಂದರು.

ಗ್ರಾಮೀಣ ಕುಶಲಕರ್ಮಿಗಳಿಗೆ ರೂ. 5,000 ಗಳ ಟೂಲ್ ಕಿಟ್ ವಿತರಣೆ ಮಾಡಲಾಗುತ್ತಿದೆ ಎಂದರಲ್ಲದೆ, ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳಲ್ಲಿನ ಶಾಲೆಗಳು, ಕಾಲೇಜುಗಳು, ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಬಾಲ ಕಾರ್ಮಿಕ ಪದ್ಧತಿ ಕುರಿತ ಜಾಗೃತಿ ಮೂಡಿಸಲು ಗೋಡೆ ಬರಹಗಳು, ಬೀದಿ ನಾಟಕಗಳು ಮಾಡಿಸಬೇಕು ಹಾಗೂ ಕೆಳ ಹಂತದಿಂದಲೇ ಸಮಸ್ಯೆಗಳ ಬಗ್ಗೆ ತಿಳಿದು ಪರಿಹಾರ ಸೂಚಿಸುವುದು ಅಧಿಕಾರಿಗಳ ಕರ್ತವ್ಯವಾಗಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಸ್. ಕೃಷ್ಣಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಭವ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್.ಎಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಪ್ಪೇಸ್ವಾಮಿ, ಅಂಗವಿಕಲರ ಕಲ್ಯಾಣಧಿಕಾರಿ ಜಗದೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ...

ರಾಜಕೀಯ

ನಾಳೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಮತಗಟ್ಟೆಗೆ ತೆರಳಿದ ಅಧಿಕಾರಿಗಳು

ನಾಳೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಮತಗಟ್ಟೆಗೆ ತೆರಳಿದ ಅಧಿಕಾರಿಗಳು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ (Bashettihalli town panchayat election) ಹಾಗೂ ದೊಡ್ಡಬಳ್ಳಾಪುರ ನಗರಸಭೆಯ 21ನೇ ವಾರ್ಡ್ ನ ಹೇಮಾವತಿಪೇಟೆ ಉಪ ಚುನಾವಣೆ ಡಿ.21ರಂದು ನಡೆಯಲಿದ್ದು, ಚುನಾವಣಾ ಆಯೋಗ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ ಪಟ್ಟಣ

[ccc_my_favorite_select_button post_id="117576"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!